ವಿಜಯಪುರ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬ ಕಾರ್ಯಕರ್ತ ವೀಕ್ಷಣೆ ಮಾಡಬೇಕೆನ್ನುವ ಉದ್ದೇಶದಿಂದ ನೇರ ಪ್ರಸಾರಕ್ಕೆ ಸಜ್ಜುಗೊಳಿಸಲಾಗುತ್ತಿದ್ದು, ಕಾರ್ಯಕರ್ತರು ಬದ್ಧತೆಯಿಂದ ಕೆಲಸ ಮಾಡಬೇಕು’ ಎಂದು ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್ ತಿಳಿಸಿದರು.

ಇಲ್ಲಿನ ಪ್ರವಾಸಿಮಂದಿರದಲ್ಲಿ ಕಾಂಗ್ರೆಸ್ ನಗರ ಘಟಕದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

‘ಪಟ್ಟಣ ಪ್ರದೇಶಗಳಲ್ಲಿ 5 ವಾರ್ಡಿಗೆ ಒಂದು ಕಡೆ, ಗ್ರಾಮ ಪಂಚಾಯಿತಿಮಟ್ಟದಲ್ಲಿ ಒಂದು ಕಡೆ ಎಲ್ಇಡಿ ಪರದೆಗಳ ಮೂಲಕ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ವೀಕ್ಷಣೆ ಸಮಯದಲ್ಲಿ ಕಡ್ಡಾಯವಾಗಿ ಅಂತರ ಕಾಪಾಡಿಕೊಳ್ಳಬೇಕು. ಸ್ಯಾನಿಟೈಸರ್ ಬಳಕೆ ಮಾಡಬೇಕು, ಮಾಸ್ಕ್ ಧರಿಸಿಕೊಂಡಿರಬೇಕು. ಯಾವ ಭಾಗದಲ್ಲಿ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತದೆ. ಎಷ್ಟು ಜನ ಸೇರುತ್ತಾರೆ. ಅಲ್ಲಿ ಏನೇನು ವ್ಯವಸ್ಥೆಗಳನ್ನು ಮಾಡಲಾಗಿರುತ್ತದೆ ಎನ್ನುವ ಕುರಿತು ಕೆಪಿಸಿಸಿಗೆ ಸ್ಪಷ್ಟ ಮಾಹಿತಿಯನ್ನು ರವಾನೆ ಮಾಡಬೇಕು’ ಎಂದರು.

ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಬಿ.ಚೇತನ್ ಗೌಡ ಮಾತನಾಡಿ, ‘ಯಾವುದೇ ಕಾರ್ಯಕರ್ತನಿಗೆ ಕಾರ್ಯಕ್ರಮ ವೀಕ್ಷಣೆಗೆ ತೊಂದರೆಯಾಗದ ರೀತಿಯಲ್ಲಿ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ. ಪ್ರತಿಯೊಬ್ಬ ಕಾರ್ಯಕರ್ತನೂ ಈ ವಿನೂತನ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಪಕ್ಷಕ್ಕೆ ಹೊಸ ಆಯಾಮ ನೀಡಬೇಕು’ ಎಂದರು.

ಕಾಂಗ್ರೆಸ್ ನಾಯಕ ಮುನಿನರಸಿಂಹಯ್ಯ ಮಾತನಾಡಿ, ‘ಹಳ್ಳಿಯ ಬೂತ್‌ಮಟ್ಟದಿಂದಲೇ ಪಕ್ಷವನ್ನು ಗಟ್ಟಿಗೊಳಿಸುವಂತಹ ಕೆಲಸ ಮಾಡಲು ಪದಗ್ರಹಣ ಕಾರ್ಯಕ್ರಮವನ್ನು ಹಳ್ಳಿಯಲ್ಲೂ ವೀಕ್ಷಣೆ ಮಾಡುವಂತಹ ಅವಕಾಶವನ್ನು ಕಲ್ಪಿಸಲಾಗಿದೆ. ಕಾರ್ಯಕ್ರಮ ಯಾವುದೇ ದಿನಾಂಕದಂದು ನಡೆದರೂ ಕಾರ್ಯಕ್ರಮದ ವೀಕ್ಷಣೆಗೆ ಕಾರ್ಯಕರ್ತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು’ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ರಾಮಚಂದ್ರಪ್ಪ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಗೌಸ್ ಖಾನ್, ಚಿನ್ನಪ್ಪ, ಎಂ.ಸತೀಶ್ ಕುಮಾರ್, ಸಂಪತ್ ಕುಮಾರ್, ನಗರ ಘಟಕದ ಅಧ್ಯಕ್ಷ ವಿ.ಎಂ.ನಾಗರಾಜ್, ಪ್ರಧಾನ ಕಾರ್ಯದರ್ಶಿ ಎಸ್.ಮಂಜುನಾಥ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.