ಮುಂದಿನ ದಿನಗಳಲ್ಲಿ ಶುದ್ಧ ತುಪ್ಪದಿಂದ ತಯಾರಿಸಿದ ಲಡ್ಡನ್ನು ಭಕ್ತರಿಗೆ ಪ್ರಸಾದವಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು.
ರಾಮಲಿಂಗಾರೆಡ್ಡಿ, ಸಚಿವ, ಮುಜರಾಯಿ ಇಲಾಖೆ
ಪ್ರಾಧಿಕಾರ ರಚನೆಯಾದ ನಂತರ ಕ್ಷೇತ್ರದ ಅಭಿವೃದ್ಧಿ ವೇಗ ದೊರೆತಿದೆ. ರಥೋತ್ಸವಕ್ಕೆ ಲಕ್ಷಾಂತರ ಜನ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಅಗತ್ಯ ಸೌಲಭ್ಯ ಕಲ್ಪಿಸಲು ಸಿದ್ಧತೆ ಆರಂಭಿಸಲಾಗಿದೆ.
ಎನ್.ರಂಗಪ್ಪ, ಸದಸ್ಯ, ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ
ರಥೋತ್ಸವ ಹಾಗೂ ದನಗಳ ಜಾತ್ರೆ ಸಂದರ್ಭದಲ್ಲಿ ಕ್ಷೇತ್ರಕ್ಕೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಹೆಚ್ಚುವರಿಯಾಗಿ ವಿಶೇಷ ಬಸ್ ಸೌಲಭ್ಯ ಕಲ್ಪಿಸುವಂತೆ ಸಚಿವರಲ್ಲಿ ಮನವಿ ಮಾಡಲಾಗಿದೆ.
ಆರ್.ಮಹೇಶ್, ಸದಸ್ಯ, ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ