ಆನೇಕಲ್ : ಬನ್ನೇರುಘಟ್ಟ ಜೈವಿಕ ಉದ್ಯಾನದ 4 ತಿಂಗಳ ಸಿಂಹದ ಮರಿವೊಂದನ್ನು ಬೆಂಗಳೂರು ಮೂಲದ ಸ್ಟಾರ್ಟ್ ಅಪ್ ಕಂಪನಿಯೊಂದು ದತ್ತು ಪಡೆದಿದೆ. ₹1.25ಲಕ್ಷ ರೂ.ಗಳ ದೇಣಿಗೆ ನೀಡಿದೆ.
ಬನ್ನೇರುಘಟ್ಟ ಜೈವಿಕ ಉದ್ಯಾನದ ಸನಾ ಮತ್ತು ಶಂಕರ್ ಜೋಡಿಗೆ ಜನಿಸಿದ್ದ ಈ ನಾಲ್ಕು ತಿಂಗಳ ಈ ಮರಿಗೆ ಜಿ.ಕೃಷ್ಣ ಎಂದು ನಾಮಕರಣ ಮಾಡಲಾಗಿದೆ. ಜೈವಿಕ ಉದ್ಯಾನದ ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ಹಲವಾರು ಮಂದಿ ಉದ್ಯಾನದ ಅಭಿವೃದ್ಧಿಗೆ ನೆರವು ನೀಡತ್ತಿರುವುದು ಆಶಾದಾಯಕವಾಗಿದೆ ಎಂದು ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.