ದೊಡ್ಡಬಳ್ಳಾಪುರ: ‘ಯುವಜನರಲ್ಲಿ ರಾಷ್ಟ್ರಪ್ರೇಮ ಮತ್ತು ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವ ಭಾರತ ಸೇವಾದಳಕ್ಕೆ ದೊಡ್ಡಬಳ್ಳಾಪುರ ತವರೂರಾಗಿದೆ’ ಎಂದು ಭಾರತ ಸೇವಾದಳದ ಉಪ ದಳಪತಿ ಕಾಶಿನಾಥ್ ಬಿ. ಹಂದ್ರಾಳ್ ಹೇಳಿದರು.

ನಗರದ ಶ್ರೀಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ ಸೇವಾದಳ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಶುಕ್ರವಾರ ಉಪನ್ಯಾಸಕರಿಗೆ ಹಮ್ಮಿಕೊಂಡಿದ್ದ ಭಾರತ ಸೇವಾದಳದ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಸ್ವಾತಂತ್ರ್ಯ ಹೋರಾಟಗಾರರಾದ ರುಮಾಲೆ ಚೆನ್ನಬಸವಯ್ಯ, ಶಂಪೂರ್ ಗುರುಶಂಕರಯ್ಯ ಮುಂತಾದವರು ಭಾರತ ಸೇವಾದಳವನ್ನು ರಾಜ್ಯಮಟ್ಟದಲ್ಲಿ ಕಟ್ಟಿ ಬೆಳೆಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಸೇವಾದಳದ ಪಾತ್ರ ಮಹತ್ವವಾಗಿತ್ತು ಎಂದರು.

ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪ್ರಮೋದ್ ಕುಲಕರ್ಣಿ ಮಾತನಾಡಿದರು. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಡಾ.ಎಂ. ಸುಬ್ರಹ್ಮಣ್ಯ, ಪ್ರಾಂಶುಪಾಲ ಎನ್. ಆನಂದಮೂರ್ತಿ, ಭಾರತ ಸೇವಾದಳದ ಕೇಂದ್ರ ಸಮಿತಿ ಸದಸ್ಯ ರವಿಕುಮಾರ್, ಜಿಲ್ಲಾ ಸಂಘಟಕ ರಾಜು, ತಾಲ್ಲೂಕು ಸಂಘಟಕ ಜಿ. ಸುರೇಶ್, ಶಾಖಾ ಮುಖ್ಯಸ್ಥ ಎಸ್. ಬೋರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.