ವಿಜಯಪುರ:‘ಗ್ರಾಮೀಣ ಭಾಗದಲ್ಲಿ ಜೀವಂತವಾಗಿರುವ ರಂಗ ಕಲೆಯನ್ನು ಮತ್ತಷ್ಟು ಶ್ರೀಮಂತಗೊಳಿಸುವಂತಹ ಕೆಲಸ ಮಾಡಬೇಕಾಗಿದೆ’ ಎಂದು ತಾಲ್ಲೂಕು ಕನ್ನಡ ಕಲಾವಿದರ ಸಂಘದ ಅಧ್ಯಕ್ಷ ಮೋಹನ್ ಬಾಬು ಹೇಳಿದರು.

ಇಲ್ಲಿನ ಸಂತೆ ಗೇಟ್ನಲ್ಲಿರುವ ಕನ್ನಡ ಕಲಾವಿದರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಕನ್ನಡ ದೀಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಳ್ಳಿಗಳಲ್ಲಿರುವ ರಂಗ ಕಲಾವಿದರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವಂತಹ ಕೆಲಸ ಮಾಡಬೇಕಾಗಿರುವುದು ನಮ್ಮ ಧರ್ಮ. ಕಲಾವಿದರ ಬದುಕಿಗೆ ಆಶ್ರಯ ಕಲ್ಪಿಸುವ ಕಾರ್ಯಕ್ರಮಗಳನ್ನು ಅಧಿಕಾರಕ್ಕೆ ಬಂದ ಯಾವ ಸರ್ಕಾರಗಳೂ ಮಾಡದ ಕಾರಣ ರಂಗಭೂಮಿ ಕಲಾವಿದರ ಬದುಕು ದುಸ್ತರವಾಗುತ್ತಿದೆ ಎಂದು ವಿಷಾದಿಸಿದರು.

ರಂಗಭೂಮಿ ಕಲಾವಿದರಿಂದ ಗ್ರಾಮೀಣ ಭಾಗದಲ್ಲಿ ಜನಪದ ಸಾಹಿತ್ಯ ಜೀವಂತವಾಗಿದೆ. ಇಂತಹ ಕಲಾವಿದರ ಏಳಿಗೆ ಹಾಗೂ ಸಾಹಿತ್ಯದ ಉದ್ಧಾರಕ್ಕಾಗಿ ಪ್ರತ್ಯೇಕವಾದ ಇಲಾಖೆಯಿದ್ದರೂ ನಾಡಿನಲ್ಲಿ ಕಲಾವಿದರು ಹಾಗೂ ಕಲೆ ಅಳಿವಿನಂಚಿಗೆ ಸರಿಯುತ್ತಿರುವುದು ದುರಂತ. ಈ ಬಗ್ಗೆ ಕಲಾವಿದರು ಒಗ್ಗಟ್ಟಾಗಿ ಸರ್ಕಾರದ ಕಣ್ಣು ತೆರೆಸುವಂತಹ ಕೆಲಸ ಮಾಡಬೇಕಾಗಿದೆ. ತಾಲ್ಲೂಕಿನಲ್ಲಿ ಕಲಾವಿದರ ಭವನ ನಿರ್ಮಾಣವಾಗಬೇಕು. ಕಲಾವಿದರಿಗೆ ಪ್ರತಿ ತಿಂಗಳು ಮಾಸಾಶನ ನೀಡುವಂತಾಗಬೇಕು ಎಂದು ಒತ್ತಾಯಿಸಿದರು.

ಸಾಹಿತಿ ಆರ್.ಕೆ. ನಂಜೇಗೌಡ ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿ ಪ್ರಾಮಾಣಿಕವಾಗಿ ಕನ್ನಡದ ಸೇವೆ ಮಾಡುವವರು, ಕಲಾವಿದರಿಗೆ ವೇದಿಕೆಗಳು ಕೊಟ್ಟು ಅವರಿಗಾಗಿ ದುಡಿಯವಂತಹ ವ್ಯಕ್ತಿಗಳು ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಇವರನ್ನು ಗುರ್ತಿಸುವಂತಹ ಕೆಲಸವನ್ನು ಯಾವ ಸರ್ಕಾರವೂ ಮಾಡಿಲ್ಲ ಎಂದು ದೂರಿದರು.

ಸರ್ಕಾರದ ಗಮನ ಸೆಳೆಯಬೇಕಾದರೆ ಹೋರಾಟ ಮಾಡಬೇಕಾಗಿ ಬಂದಿರುವುದು ಶೋಚನೀಯ. ಕೊರೊನಾ ಸಂಕಷ್ಟದ ಸಮಯದಲ್ಲಿ ಸಾಕಷ್ಟು ಮಂದಿ ಕಲಾವಿದರು ತೊಂದರೆಗೆ ಸಿಲುಕಿದ್ದಾರೆ. ಅವರಿಗೆ ಸ್ಪಂದಿಸುವಂತಹ ಕೆಲಸವನ್ನು ಸರ್ಕಾರ ಮಾಡಬೇಕು ಎಂದರು.

ಮುಖಂಡ ಬಿ.ಕೆ. ಶಿವಪ್ಪ ಮಾತನಾಡಿ, ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಎಲೆಮರೆ ಕಾಯಿಯಂತೆ ಇರುವ ಕಲಾವಿದರಿಗೆ ವೇದಿಕೆಗಳು ಕಲ್ಪಿಸುವಂತಹ ಕೆಲಸ ಮಾಡಬೇಕು. ಅವರಲ್ಲಿನ ಪ್ರತಿಭೆಗಳನ್ನು ಅನಾವರಣಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕು. ಇಂತಹ ವೇದಿಕೆ ಒದಗಿಸಿಕೊಡಬೇಕಾದರೆ ಸುಸಜ್ಜಿತವಾದ ಕಲಾಭವನ ನಿರ್ಮಾಣ ಮಾಡಬೇಕಾಗಿದೆ ಎಂದರು.

ಬಿಜೆಪಿ ಮುಖಂಡ ಆರ್.ಸಿ. ಮಂಜುನಾಥ್ ಮಾತನಾಡಿ, ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕಾಗಿದೆ ಎಂದು ಹೇಳಿದರು.

ಶರಣ ಸಾಹಿತ್ಯ ಪರಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಹಡಪದ್ ಮಾತನಾಡಿ, ಕೋವಿಡ್ ಮತ್ತು ಲಾಕ್ಡೌನ್ನಿಂದ ವೃತ್ತಿ ಕಲಾವಿದರ ಬದುಕು ಸಂಕಷ್ಟದಲ್ಲಿದೆ. ಕಲಾವಿದರಿಗೆ ಮಾಸಾಶನ ಬಿಡುಗಡೆ ಆಗಿಲ್ಲ. ಇದರಿಂದ ಕಲಾವಿದರ ಬದುಕು ಮತ್ತಷ್ಟು ದುಸ್ತರವಾಗಿದೆ ಎಂದರು.

ರಾಜ್ಯ ಸರ್ಕಾರ ₹ 3 ಸಾವಿರ ಪರಿಹಾರದ ಪ್ಯಾಕೇಜ್ ಘೋಷಣೆ ಮಾಡಿದ್ದರೂ ಮಾಸಾಶನ ಬಿಡುಗಡೆಯಾಗದೇ ಕಲಾವಿದರು ತೊಂದರೆಗೆ ಸಿಲುಕಿದ್ದಾರೆ ಎಂದು ಹೇಳಿದರು.

ಎಂ.ವಿ. ನಾಯ್ಡು ತಂಡದಿಂದ ರಂಗಗೀತೆಗಳ ಗಾಯನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಲಾವಿದ ಹಾರೋಹಳ್ಳಿ ಸುಬ್ಬರಾಯಪ್ಪ ಅವರನ್ನು ಸನ್ಮಾನಿಸಲಾಯಿತು. ಜೆ.ಆರ್. ಮುನಿವೀರಣ್ಣ, ಸುಭ್ರಮಣಿ, ಗೋವಿಂದರಾಜು, ಕನಕರಾಜು, ರಾಮಣ್ಣ, ಕೃಷ್ಣಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.