ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಘಟಿತರಾಗಲು ಸಮಾಜಕ್ಕೆ ಸಲಹೆ: ಟಿ. ವೆಂಕಟರಮಣಯ್ಯ

ಘಾಟಿ ಸುಬ್ರಹ್ಮಣ್ಯದಲ್ಲಿ ಕುಂಬಾರ ಸಮುದಾಯ ಭವನ ನಿರ್ಮಾಣ
Last Updated 1 ಫೆಬ್ರುವರಿ 2021, 5:53 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನೂತನ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರ, ಜನಪ್ರತಿನಿಧಿಗಳು, ಮುಖಂ
ಡರು ಹೆಚ್ಚಿನ ರೀತಿಯಲ್ಲಿ ಸಹಕಾರ ನೀಡಿದ್ದಾರೆ. ಭವನ ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವತ್ತ ಮುಂದಾಗಬೇಕೆಂದು ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕುಂಬಾರರ ಸಮುದಾಯ ಭವನ ಭಾನುವಾರ ಉದ್ಘಾಟಿಸಿ ಮಾತನಾಡಿದರು.

ಈಗಾಗಲೇ ಸಮುದಾಯ ಭವನ ನಿರ್ಮಾಣಕ್ಕೆ ಹಿರಿಯ ರಾಜಕಾರಣಿಗಳಾದ ಆರ್.ಎಲ್.ಜಾಲಪ್ಪ ಅವರು ₹20 ಲಕ್ಷ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ₹30ಲಕ್ಷ ನೀಡಲಾಗಿತ್ತು. ಇದಲ್ಲದೆ ಕುಂಬಾರ ಸಮುದಾಯದ ಮುಖಂಡರು ಸಹ ಹೆಚ್ಚಿನ ಸಹಕಾರ ನೀಡಿದ್ದಾರೆ. ಭವನದಲ್ಲಿ ಇನ್ನು ಬಾಕಿ ಇರುವ ಕೆಲಸಗಳಿಗೆ ಸರ್ಕಾರದಿಂದ ₹5ಲಕ್ಷ ಕೊಡಿಸುವುದಾಗಿ ಭರವಸೆ ನೀಡಿದರು.

ಕುಂಬಾರರ ಛತ್ರದ ಅಭಿವೃದ್ಧಿ ಮತ್ತು ವಿವಿಧೋದ್ದೇಶ ಟ್ರಸ್ಟ್‍ನ ಅಧ್ಯಕ್ಷ ವೆಂಕಟಾಚಲಯ್ಯ ಮಾತನಾಡಿ, ಮೈಸೂರು ಮಹಾರಾಜರು ಘಾಟಿ ಕ್ಷೇತ್ರದಲ್ಲಿ ಅನ್ನದಾನ ಮಾಡಲು ಜಾಗ ನೀಡಿದ್ದರು. ಹಳೆಯದಾದ ಮಂಟಪನು ಕೆಡವಿ ಹೊಸದಾಗಿ ಭವನ ನಿರ್ಮಾಣ ಮಾಡಲಾಗಿದೆ. ಈ ಭವನ ನಿರ್ಮಾಣಕ್ಕೆ ಸಮುದಾಯ ಹೆಚ್ಚಿನ ರೀತಿಯಲ್ಲಿ ಸಹಕರಿಸಿದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಎಚ್‌.ಅಪ್ಪಯ್ಯ ಮಾತನಾಡಿ, ಧಾರ್ಮಿಕ ಪುಣ್ಯ ಕ್ಷೇತ್ರದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿರುವುದು ಶ್ಲಾಘನೀಯ ಎಂದರು.

ಅಖಿಲ ಕರ್ನಾಟಕ ಕುಂಭೇಶ್ವರ ಟ್ರಸ್ಟ್ ಅಧ್ಯಕ್ಷ ಆರ್.ಶ್ರೀನಿವಾಸ್ ಮಾತನಾಡಿ, 4 ವರ್ಷಗಳ ಹಿಂದೆ ಸಮು
ದಾಯ ಭವನ ಜಾಗದಲ್ಲಿದ್ದ ಕಲ್ಲಿನ ಜೋಪಡಿಯಿತ್ತು. ಈಗ ಉತ್ತಮವಾಗಿ ಭವನ ನಿರ್ಮಾಣವಾಗಿದ್ದು ಆರ್ಥಿಕವಾಗಿ ಹಿಂದುಳಿದಿರುವ ಸಮುದಾಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಸಮುದಾಯದ ರಾಜೇಂದ್ರ ಅವರು ಸಮುದಾಯ ಭವನಕ್ಕೆ ₹1ಲಕ್ಷ ದೇಣಿಗೆ ಸೇರಿದಂತೆ ಹಲವರು ಅನ್ನದಾನ ಮತ್ತಿತರ ಕಾರ್ಯಕ್ಕೂ ದೇಣಿಗೆ ನೀಡಿದರು.

ಕಾರ್ಯಕ್ರಮದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ದೇಣಿಗೆ ನೀಡಿದವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ಎಪಿಎಂಸಿ ಅಧ್ಯಕ್ಷ ವಿಶ್ವನಾಥರೆಡ್ಡಿ, ಕುಂಬಾರ ಸಮುದಾಯದ ಮುಖಂಡ ವಿರೂಪಾಕ್ಷ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT