ರಾಜರಾಜೇಶ್ವರಿನಗರ: ‘ಸೂಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಒಳಚರಂಡಿ ಕಾಮಗಾರಿ ಪೂರ್ಣಗೊಂಡ ನಂತರ ಕಾವೇರಿ ನೀರಿನ ಸಂಪರ್ಕ ಕಲ್ಪಿಸಲಾಗುವುದು‘ ಎಂದು ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಬಸವೇಶ್ವರ ನಗರದಲ್ಲಿ ಒಳಚರಂಡಿ, ಸಿ.ಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ(ಬಿಡಿಎ) ಕೆಂಪೇಗೌಡ ಬಡಾವಣೆಗೆ ಹೊಂದಿಕೊಂಡಿರುವ 14 ಗ್ರಾಮಗಳ ವ್ಯಾಪ್ತಿಯಲ್ಲಿ ₹55 ಕೋಟಿ ವೆಚ್ಚದಲ್ಲಿ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ’ ಎಂದು ತಿಳಿಸಿದರು.

‘ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರು ಸಹಿ ಹಾಕಿದರೆ, ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದು ಸರಿಯಲ್ಲ. ಗ್ರೇಟರ್ ಬೆಂಗಳೂರು ಮಾಡುವುದರಿಂದ ಬೆಂಗಳೂರು ಪ್ರಗತಿ ಕಾಣಲಿದೆ’ ಎಂದರು.

ಸೂಲಿಕೆರೆ ಗ್ರಾಮ ಪಾಂಚಾಯಿತಿ ಸದಸ್ಯ ಎಸ್.ಆರ್.ಮೋಹನ್ ಕುಮಾರ್, ಕಾಂಗ್ರೆಸ್ ಮುಖಂಡ ಕೆ.ಎಚ್.ತಿಮ್ಮೇಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿಕ್ಕಣ್ಣ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ವೀರಭದ್ರಸ್ವಾಮಿ, ಕಾರ್ಯದರ್ಶಿ ಉಮಾದೇವಿ, ಬಯಲು ಬಸವೇಶ್ವರ ಹಿರಿಯ ನಾಗರಿಕ ವೇದಿಕೆಯ ಮುಖಂಡರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.