ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಠಿ ಪ್ರಹಾರ‌: ಪೊಲೀಸರ ವಿರುದ್ಧ ಶಾಸಕ ಶರತ್‌ ಗರಂ

Last Updated 31 ಜನವರಿ 2021, 4:18 IST
ಅಕ್ಷರ ಗಾತ್ರ

ಹೊಸಕೋಟೆ: ನಗರದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಯ ಗುದ್ದಲಿಪೂಜೆಯಲ್ಲಿ ಶಿಷ್ಟಾಚಾರ ಪಾಲನೆಯಾಗಿಲ್ಲ ಎಂದು ಆರೋಪಿಸಿ ಬೆಂಬಲಿಗರು ನಡೆಸಿದ ಪ್ರತಿಭಟನೆ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಡಿವೈಎಸ್‌ಪಿ ಉಮಾಶಂಕರ್, ಸರ್ಕಲ್ ಇನ್‌ಸ್ಪೆಕ್ಟರ್‌ ರಂಗಸ್ವಾಮಿ ಮತ್ತು ಸಬ್‌ ಇನ್‌ಸ್ಪೆಕ್ಟರ್ ರಾಜು ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಶಾಸಕ ಶರತ್‌ ಬಚ್ಚೇಗೌಡ ಆಗ್ರಹಿಸಿದರು. ‌‌

ಅಧಿಕಾರದಲ್ಲಿ ಇರುವವರ ಪರವಾಗಿ ಸರ್ಕಾರಿ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆ. ಲಾಠಿ ಪ್ರಹಾರದ ವಿರುದ್ಧ ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಲಾಗುವುದು. ಈ ಬಗ್ಗೆ ಅಧಿಕಾರಿಗಳು ಶಿಸ್ತುಕ್ರಮ ಜರುಗಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯತಿ ಸದಸ್ಯ ಮಂಜುನಾಥ್, ಮುಖಂಡರಾದ ಭೈರೇಗೌಡ, ಹುಲ್ಲುರು ಮಂಜುನಾಥ್, ಮುನಿಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT