ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.8ರಂದು ರೈತರಿಗೆ ಋಣಮುಕ್ತ ಪತ್ರ ವಿತರಣೆ

ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸಿದ ಜೆಡಿಎಸ್
Last Updated 6 ಡಿಸೆಂಬರ್ 2018, 12:57 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ‘ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪ್ರಣಾಳಿಕೆಯಲ್ಲಿ ರೈತರಿಗೆ ನೀಡಿದ್ದ ಭರವಸೆಯಂತೆ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಬೆಳೆ ಸಾಲಮನ್ನಾ ಮಾಡಿ ರೈತರಿಗೆ ನೀಡಿದ್ದ ಮಾತು ಉಳಿಸಿಕೊಂಡಿದೆ‌’ ಎಂದು ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಮುನೇಗೌಡ ಹೇಳಿದರು.

‘ಡಿ.8ರಂದು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರೈತರಿಗೆ ಋಣಮುಕ್ತ ಪತ್ರವನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನೀಡಲಿದ್ದಾರೆ.ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿರುವ ರೈತರನ್ನು ಮಾತ್ರ ಗುರುತಿಸಿ ದಾಖಲೆಗಳನ್ನು ಪಡೆಯುವ ಸಲುವಾಗಿ ರಾಜ್ಯದ ದೊಡ್ಡಬಳ್ಳಾಪುರ ಹಾಗೂ ಸೇಡಂ ತಾಲ್ಲೂಕುಗಳನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಳ್ಳಲಾಗಿತ್ತು. ಬೆಳೆ ಸಾಲ ಪಡೆದಿದ್ದ ರೈತರಿಂದ ಸೂಕ್ತ ದಾಖಲಾತಿಗಳನ್ನು ಸಂಗ್ರಹಿಸುವಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಎಲ್ಲರೂ ಸೂಕ್ತ ರೀತಿಯಲ್ಲಿ ಕಾರ್ಯ ನಿರ್ವಹಿಸಿರುವುದರಿಂದ ರೈತರಿಗೆ ಋಣಮುಕ್ತ ಪತ್ರ ನೀಡಲು ಸಹಾಯಕವಾಗಿದೆ’ ಎಂದರು.

ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ’ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭಾಗವಹಿಸುತ್ತಿರುವುದು ಜೆಡಿಎಸ್ ಸಂಘಟನೆಗೆ ಒಳ್ಳೆಯ ಅವಕಾಶ. ಸಮ್ಮಿಶ್ರ ಸರ್ಕಾರಕ್ಕೆ ಮಹತ್ವದ ಸಮಾರಂಭ ಇದಾಗಿದೆ. ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿಚಾರಗಳನ್ನು ತಿಳಿದುಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಕ್ಷೇತ್ರದಲ್ಲಿ ಸೂಕ್ತ ರೀತಿಯಲ್ಲಿ ಪ್ರಚಾರ ಕೈಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಬೇಕು’ ಎಂದರು.

ನೆಲಮಂಗಲ ಶಾಸಕ ಡಾ.ಶ್ರೀನಿವಾಸಮೂರ್ತಿ ಮಾತನಾಡಿ, ‘ರೈತರ ಸಾಲಮನ್ನಾ ಮಾಡಿದರೆ ಆರ್ಥಿಕ ಬಿಕ್ಕಟ್ಟು ತಲೆದೂರಲಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದರೂ ಲೆಕ್ಕಿಸದೆ, ಕುಮಾರಸ್ವಾಮಿ ಅವರು ದೇವೇಗೌಡರ ಮಾರ್ಗದರ್ಶನದಂತೆ ರೈತರ ಬೆಳೆ ಸಾಲಮನ್ನಾ ಮಾಡಿದ್ದಾರೆ. ರಾಜ್ಯದಲ್ಲಿ ₹52 ಸಾವಿರ ಕೋಟಿ ಬೆಳೆ ಸಾಲಮನ್ನಾ ಆಗಲಿದೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಲಕ್ಷ್ಮೀಪತಯ್ಯ, ನಗರ ಘಟಕದ ಅಧ್ಯಕ್ಷ ವಿ.ಎಸ್.ರವಿಕುಮಾರ್, ಎಪಿಎಂಸಿ ಅಧ್ಯಕ್ಷ ಮಂಜುನಾಥ್, ನಿರ್ದೇಶಕ ಲಕ್ಷ್ಮೀನಾರಾಯಣ್, ನಗರಸಭೆ ಸದಸ್ಯ ಆರ್.ಕೆಂಪರಾಜ್, ಪಿ.ಸಿ. ಲಕ್ಷ್ಮೀನಾರಾಯಣ್, ಶಂಸುನ್ನೀಸಾ, ಸುಶೀಲ ರಾಘವ, ಟಿಎಪಿಎಂಸಿಎಸ್ ನಿರ್ದೇಶಕ ಅಂಜನಗೌಡ, ಜೆಡಿಎಸ್ ಯುವ ಘಟಕದ ಜಿಲ್ಲಾ ಅಧ್ಯಕ್ಷ ಸುನಿಲ್ ಕುಮಾರ್, ಮುಖಂಡರಾದ ಜಿ.ಸತ್ಯನಾರಾಯಣ್, ಗೌರೀಶ್, ಅಖಿಲೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT