ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೋಟೆಯಲ್ಲಿ ಡಿ.1ಕ್ಕೆ ವಿಶ್ವ ಏಡ್ಸ್ ದಿನ

Published 28 ನವೆಂಬರ್ 2023, 14:14 IST
Last Updated 28 ನವೆಂಬರ್ 2023, 14:14 IST
ಅಕ್ಷರ ಗಾತ್ರ

ದೇವನಹಳ್ಳಿ: ಹೊಸಕೋಟೆ ತಾಲ್ಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿ.1ರಂದು ವಿಶ್ವ ಏಡ್ಸ್ ದಿನ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್ ತಿಳಿಸಿದರು.

ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿ ಮಾತನಾಡಿ, 2023ರ ವಿಶ್ವ ಏಡ್ಸ್ ದಿನವನ್ನು ‘ಸಮುದಾಯಗಳು ಮುನ್ನಡೆಸಲಿ’ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಕಾರ್ಯಕ್ರಮದ ದಿನದಂದು ಹೊಸಕೋಟೆ ಟೌನ್‌ನಲ್ಲಿ ಜಾಥಾ  ‌ನಡೆಸಲಾಗುವುದು. ಶಾಲಾ–ಕಾಲೇಜು ಮತ್ತು ಜನಸಂದಣಿ ಸ್ಥಳಗಳಲ್ಲಿ ಬೀದಿ ನಾಟಕ ಮೂಲಕ ಜನಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ 2007ರಿಂದ 2023ರ ಅಕ್ಟೋಬರ್ ತಿಂಗಳವರೆಗೆ 2,336 ಪುರುಷರು, 1,876 ಮಹಿಳೆಯರು ಹಾಗೂ 39 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 4,251 ಎ‌ಚ್‌ಐವಿ ಸೋಂಕಿರು ಇದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 1,027, ದೇವನಹಳ್ಳಿಯಲ್ಲಿ 884, ಹೋಸಕೋಟೆಯಲ್ಲಿ 1,337, ನೆಲಮಂಗಲ ತಾಲ್ಲೂಕಿನಲ್ಲಿ 525 ಪುರುಷರು , 447 ಸ್ತ್ರೀಯರು, 31 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 1,003 ಸೋಂಕಿತರು ಇದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ನಾಗೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT