ದೊಡ್ಡಬಳ್ಳಾಪುರ: ಜನರನ್ನು ಶಾಶ್ವತವಾಗಿ ಬಡವರನ್ನಾಗಿಸುವುದೇ ರಾಷ್ಟ್ರಿಯ ಪಕ್ಷಗಳ ಉದ್ದೇಶವಾಗಿದೆ. ಇಂದಿಗೂ ಎಸ್.ಸಿ, ಎಸ್.ಟಿ, ಹಿಂದುಳಿದ ವರ್ಗದ ಜನತೆಯನ್ನು ಮತಬ್ಯಾಂಕ್ ಗಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಆರೋಪಿಸಿದರು.

ನಗರದಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷದ ಕಚೇರಿಪಾಳ್ಯ ಶಾಖೆ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಗಳು ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿವೆ. ಸಂವಿಧಾನವು ಯುವಕರಿಗೆ ಉದ್ಯೋಗ ನೀಡಬೇಕೆಂದು ಹೇಳುತ್ತವೆ. ಆದರೆ ಒಂದೇ ಒಂದು ಕಾನೂನನ್ನು ಸಂವಿಧಾನದ ಆಶಯದಂತೆ ಜಾರಿಗೆ ತಂದಿಲ್ಲ. ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸಂಘ ಪರಿವಾರ, ಸಂವಿಧಾನ ಬದಲಿಸುವ ಮಾತನಾಡಿ, ದೇಶ ದ್ರೋಹಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು.

ಕೇಂದ್ರದ ವಿರೋಧ ಪಕ್ಷವಾದ ಕಾಂಗ್ರೆಸ್ ಪಕ್ಷ ತನ್ನ ಅಧಿಕಾರಾವಧಿಯಲ್ಲಿ ಭಾರತ ಸಂವಿಧಾನವನ್ನೇ ಮೂಲೆಯಲ್ಲಿಟ್ಟು 95 ಬಾರಿ ತಿದ್ದುಪಡಿ ಮಾಡಿ ಸಂವಿಧಾನ ವಿರೋಧಿಯಾಗಿ ನಡೆದುಕೊಂಡು, ಈಗ ಸಂವಿಧಾನ ರಕ್ಷಣೆಯ ನಾಟಕ ಆಡುತ್ತಿರುವ ಕಾಂಗ್ರೆಸ್ ಬಣ್ಣ ಬಯಲಾಗಿದೆ ಎಂದು ದೂರಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ನಂದಿಗುಂದ ವೆಂಕಟೇಶ್, ಸಂವಿಧಾನ ವಿರೋಧಿಯಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮನುಸ್ಮೃತಿ ಪ್ರೇರಿತ ನೀತಿಯನ್ನು ಖಂಡಿಸುತ್ತೇವೆ. ವಿದ್ಯೆ, ಆರೋಗ್ಯ, ಅಧಿಕಾರ, ಸಂಪತ್ತು, ಭೂಮಿಯನ್ನು ಸರ್ವರಿಗೂ ಸಮಾನವಾಗಿ ಹಂಚಬೇಕು ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಒತ್ತಾಯಿಸುತ್ತದೆ ಎಂದರು.

ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಕಾರ್ಯದರ್ಶಿ ಬಸವರಾಜು, ಜಿಲ್ಲಾಧ್ಯಕ್ಷ ಮಹಾದೇವ, ತಾಲ್ಲೂಕು ಅಧ್ಯಕ್ಷ ನಂಜೇಶ್, ಖಜಾಂಚಿ ದೇವರಾಜು, ನಗರ ಅಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷ ಶ್ರೀನಿವಾಸ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.