ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಎಲ್ಲರೂ ಉತ್ತೀರ್ಣ

Last Updated 10 ಆಗಸ್ಟ್ 2021, 2:34 IST
ಅಕ್ಷರ ಗಾತ್ರ

ದೇವನಹಳ್ಳಿ: ಜಿಲ್ಲೆಯಲ್ಲಿಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ಎಲ್ಲರೂ ಉತ್ತೀರ್ಣರಾಗಿದ್ದಾರೆ ಎಂದು ಉಪ ನಿರ್ದೇಶಕ ಗಂಗಮಾರೇಗೌಡ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 13,356 ಮಂದಿ ಹೊಸದಾಗಿ ಪರೀಕ್ಷೆಗೆ ನೋಂದಾಯಿಸಿದ್ದವರ ಪೈಕಿ 25 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಒಟ್ಟು 13,534 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ.

ಸರ್ಕಾರ ಪರೀಕ್ಷೆಗೆ ಮುನ್ನವೇ ಎಲ್ಲರೂ ಉತ್ತೀರ್ಣರು ಎಂದು ಘೋಷಿಸಿತ್ತು. ಕೋವಿಡ್ 2ನೇ ಅಲೆಯ ನಡುವೆಯೂ ಪರೀಕ್ಷೆ ನಡೆಸಿ ಜಿಲ್ಲಾಡಳಿತ ಯಶಸ್ವಿಯಾಗಿದೆ. ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಪ್ರಥಮ ಪಿ.ಯು ದಾಖಲಾತಿಗೆ ಬೇಡಿಕೆ ಹೆಚ್ಚಾಗಿದೆ. ಯಾವ ಗ್ರೇಡ್‌ನಲ್ಲಿ ಉತ್ತೀರ್ಣರಾಗಿದ್ದಾರೆ ಎಂಬ ಮಾಹಿತಿ ಹೊರ ಬೀಳಬೇಕಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಹೊಸಕೋಟೆಯ ನ್ಯೂ ಹಾರಿಜನ್ ಶಾಲೆಯ ವಿದ್ಯಾರ್ಥಿಯಾದಗ್ರೀಷ್ಮ, ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್‌ಜೆಸಿಆರ್ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿಯರಾದ ಲಿಖಿತಾ,ಯಶಸ್ವಿನಿ, ದೊಡ್ಡಬಳ್ಳಾಪುರದ ಕಾರ್ಮೆಲ್ ಜ್ಯೋತಿ ಶಾಲೆಯ ವಿದ್ಯಾರ್ಥಿನಿಪ್ರಿಯದರ್ಶಿನಿ 625ಕ್ಕೆ 625 ಅಂಕ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT