‘ಪುರಸಭೆ ಚುನಾವಣೆಗೆ ಅನ್ವಯವಾಗದ ಮೈತ್ರಿ’

ಶುಕ್ರವಾರ, ಮೇ 24, 2019
23 °C

‘ಪುರಸಭೆ ಚುನಾವಣೆಗೆ ಅನ್ವಯವಾಗದ ಮೈತ್ರಿ’

Published:
Updated:
Prajavani

ದೇವನಹಳ್ಳಿ: ಪುರಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಕೆಪಿಸಿಸಿ ಸದಸ್ಯ ಎ.ಚಿನ್ನಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿನ ಪಾರಿವಾಳ ಗುಡ್ಡದ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಜೆಡಿಎಸ್‌ ಮುಖಂಡರ ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. 23 ವಾರ್ಡ್‌ಗಳಲ್ಲಿ ಅರ್ಹ ಅಭ್ಯರ್ಥಿಗಳ ಆಯ್ಕೆ ನಡೆದಿದ್ದು ಶೀಘ್ರ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಮಾತನಾಡಿ, ‘ಕೆಪಿಸಿಸಿ ರಾಜ್ಯ ಘಟಕದ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಆದೇಶದಂತೆ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲ’ ಎಂದು ಹೇಳಿದರು.

ಕೆಪಿಸಿಸಿ ಹಿಂದುಳಿದ ವರ್ಗ ರಾಜ್ಯ ಘಟಕದ ಉಪಾಧ್ಯಕ್ಷ ಸಿ.ಜಗನ್ನಾಥ್ ಮಾತನಾಡಿ, ಪುರಸಭೆ ಚುನಾವಣೆಯಲ್ಲಿ ಒಂದೊಂದು ಮತ ಕೂಡ ನಿರ್ಣಾಯಕ. ಎಲ್ಲರೂ ಶ್ರಮವಹಿಸಿ ಕೆಲಸ ಮಾಡಬೇಕಿದೆ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಕೆಪಿಸಿಸಿ ಹಿಂದುಳಿದ ವರ್ಗ ರಾಜ್ಯ ಘಟಕ ಪ್ರಧಾನ ಕಾರ್ಯದರ್ಶಿ ಆರ್.ರವಿಕುಮಾರ್, ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ತಾಲ್ಲೂಕು ಅಧ್ಯಕ್ಷ ರಬ್ಬನಹಳ್ಳಿ ಮುನಿರಾಜು, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಖುದ್ದೂಸ್, ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಗೋಪಿ, ಮುಖಂಡರಾದ ಜಿ.ಸುರೇಶ್, ಸೋಮಣ್ಣ, ಜಿ.ರಮೇಶ್, ಸೊಸೈಟಿ ರಾಜಣ್ಣ, ಸತೀಶ್, ನಾಗರಾಜ್ ಇದ್ದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಘಟಕದ ಉಪಾಧ್ಯಕ್ಷೆ ಜ್ಯೋತಮ್ಮ, ಮುಖಂಡರಾದ ಶ್ರೀನಿವಾಸ್, ಅಶ್ವಥಮ್ಮ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !