ಸೋಮವಾರ, ಜೂನ್ 1, 2020
27 °C

ಹೊರ ರಾಜ್ಯಗಳಿಗೆ ದ್ರಾಕ್ಷಿ ಸಾಗಣೆಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬೆಳೆಯಲಾಗಿರುವ ದ್ರಾಕ್ಷಿ ಸೇರಿದಂತೆ ಯಾವುದೇ ರೀತಿಯ ಹಣ್ಣುಗಳನ್ನು ಹೊರ ಜಿಲ್ಲೆ, ರಾಜ್ಯಗಳಿಗೆ ಸಾಗಣೆ ಮಾಡಿ ಮಾರಾಟ ಮಾಡಲು ರೈತರು ಹಾಗೂ ವ್ಯಾಪಾರಸ್ಥರಿಗೆ ಮಂಗಳವಾರದಿಂದ ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ ತಿಳಿಸಿದ್ದಾರೆ.

ಅವರು ಈ ಬಗ್ಗೆ ಮಾಹಿತಿ ನೀಡಿ, ಸೋಮವಾರ ರಾಜ್ಯ ಮುಖ್ಯಕಾರ್ಯದರ್ಶಿಗಳೊಂದಿಗೆ ನಡೆದ ಸಭೆಯಲ್ಲಿ ಜಿಲ್ಲೆಯಲ್ಲಿ ಬೆಳೆಯಲಾಗಿರುವ ದ್ರಾಕ್ಷಿಯನ್ನು ಮಾರಾಟ ಮಾಡಲು ರೈತರಿಗೆ ಆಗಿರುವ ತೊಂದರ ಕುರಿತಂತೆ ಗಮನಕ್ಕೆ ತಂದ ನಂತರ ಅಂತರ ರಾಜ್ಯದಲ್ಲಿ ದ್ರಾಕ್ಷಿ ಮಾರಾಟಕ್ಕೆ ಅನುಮತಿ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ರಾಕ್ಷಿ ಹಣ್ಣು ಬೆಳೆಗಾರರು ಅನುಭವಿಸುತ್ತಿರುವ ಕಷ್ಟಗಳ ಕುರಿತಂತೆ ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವರದಿಗಳು ಸಹ ಸರ್ಕಾರದ ಗಮನಕ್ಕೆ ಬಂದಿದ್ದರ ಪರಿಣಾಮ ಈ ನಿರ್ಧಾರ ಕೈಗೊಳ್ಳಲಾಗಿದೆ. ದ್ರಾಕ್ಷಿ ಸೇರಿದಂತೆ ಇತರೆ ಹಣ್ಣುಗಳನ್ನು ಬೆಳೆದಿರುವ ರೈತರು ಸಹ ತಹಶೀಲ್ದಾರ್‌ ಹಾಗೂ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಿಂದ ಅಧಿಕೃತ ಪರವಾನಗಿ ಪಡೆದರೆ ಹಣ್ಣು ಸಾಗಣೆಗೆ ಅಗತ್ಯ ವಾಹನ ಬಳಸಲು ಅನುಮತಿ ನೀಡಲಾಗುವುದು ಎಂದರು.

ಇದನ್ನೂ ಓದಿ: ಲಕ್ಷಾಂತರ ರೂಪಾಯಿ ಮೌಲ್ಯದ ದ್ರಾಕ್ಷಿ ಬೆಳೆಯನ್ನು ತಿಪ್ಪೆಗೆ ಸುರಿದ ರೈತ


ಕೊಯ್ಲಾದ ದ್ರಾಕ್ಷಿಯಲ್ಲಿ ಮಾರಾಟ ಮಾಡಲು ಆಗದೆ ತಿಪ್ಪೆಗೆ ಸುರಿದ ರೈತ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು