ದೊಡ್ಡಬಳ್ಳಾಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ ಜಯಂತಿಯನ್ನು ಏಪ್ರಿಲ್ 14ರಂದೇ ಆಚರಿಸುವ ನಿರ್ಧಾರಕ್ಕೆ ಬರಲಾಗಿದೆ. ಕಾರ್ಯಕ್ರಮದ ಸ್ವರೂಪ ಕುರಿತು ಸಂಬಂಧಪಟ್ಟ ಸಂಘ–ಸಂಸ್ಥೆಗಳ ಮುಖಂಡರ ಸಮಿತಿ ರಚಿಸಿ ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಶಾಸಕ ಧೀರಜ್ ಮುನಿರಾಜ್ ತಾಲ್ಲೂಕು ಆಡಳಿತಕ್ಕೆ ಸೂಚಿಸಿದರು.

ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ದೇವರ ದಾಸಿಮಯ್ಯ ಜಯಂತಿ, ಮಹಾವೀರ್ ಜಯಂತಿ, ಅಕ್ಕಮಹಾದೇವಿ ಜಯಂತಿ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ಡಾ.ಬಾಬುಜಗಜೀವನರಾಮ್ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು.

ತಾಲೂಕಿನಲ್ಲಿರುವ ಅಂಬೇಡ್ಕರ್ ಭವನ ಹಾಗೂ ಜಗಜೀವನರಾಮ್ ಭವನಗಳಲ್ಲಿ ಉಭಯ ಮಹನೀಯರ ಬೃಹತ್ ಭಾವಚಿತ್ರಗಳನ್ನು ಜಯಂತಿಯಂದು ಅಳವಡಿಸಿ ಪೂಜೆ ಸಲ್ಲಿಸಲಾಗುವುದು. ಇಬ್ಬರೂ ಮಹನೀಯರ ಜಯಂತಿಯನ್ನು ಒಂದೇ ವೇದಿಕೆಯಲ್ಲಿ ಆಚರಿಸುವುದರಿಂದ ಪರಿಶಿಷ್ಟ ಸಮುದಾಯಗಳ ಘನತೆ ಹೆಚ್ಚಲಿದೆ. ಎಲ್ಲ ಉಪಪಂಗಡಗಳು ಒಂದು ವೇದಿಕೆಯಲ್ಲಿ ಸೇರುವುದು ಉತ್ತಮ ಬೆಳವಣಿಗೆ. ಸಂಬಂಧಪಟ್ಟ ಸಮುದಾಯಗಳ ಮುಖಂಡರು ಈ ನಿಟ್ಟಿನಲ್ಲಿ ಅಗತ್ಯ ಸಂಘಟನೆ ಕೈಗೊಳ್ಳಬೇಕು ಎಂದರು.

ಜಯಂತಿ, ಉತ್ಸವ ಆಚರಣೆಯ ಉದ್ದೇಶ ಈಡೇರಬೇಕಾದರೆ, ಮಹನೀಯರ ಆದರ್ಶಗಳು ವಿದ್ಯಾರ್ಥಿಗಳು, ಯುವ ಸಮುದಾಯವನ್ನು ತಲುಪಬೇಕು. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಅಂಬೇಡ್ಕರ್ ಹಾಗೂ ಜಗಜೀವನರಾಮ್ ಅವರ ಚಿಂತನೆಗಳನ್ನು ಪರಿಚಯಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವುದು ಅಗತ್ಯ. ಆದರೆ ಸದ್ಯ ಪರೀಕ್ಷಾ ಅವಧಿ ಮುಕ್ತಾಯಗೊಂಡಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ದಲಿತ ಸಮುದಾಯಗಳ ಹಲವು ಮುಖಂಡರು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ಬಾಬು ಜಗಜೀವನರಾಮ್ ಜಯಂತಿ ಆಚರಣೆಯ ಸ್ವರೂಪ ಹಾಗೂ ರೂಪರೇಷೆಯ ಕುರಿತು ಸಲಹೆ ನೀಡಿ, ಈ ಬಾರಿ ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಮನವಿ ಮಾಡಿದರು.

ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷೆ, ತಹಶೀಲ್ದಾರ್ ವಿಭಾ ವಿದ್ಯಾರಾಥೋಡ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎನ್.ಮುನಿರಾಜು, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಪೌರಾಯುಕ್ತ ಕಾರ್ತಿಕೇಶ್ವರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಮಾಪತಿ, ನಗರ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಕೃಷ್ಣಪ್ಪ ಇದ್ದರು.

Cut-off box - ವಿವಿಧ ಜಯಂತಿ ಆಚರಣೆ ಇದೇ ವೇಳೆ ಆದ್ಯವಚನಕಾರ ದೇವರ ದಾಸಿಮಯ್ಯ ಶಿವಶರಣೆ ಅಕ್ಕಮಹಾದೇವಿ ಹಾಗೂ ಭಗವಾನ್ ಮಹಾವೀರ ಜಯಂತಿ ಆಚರಣೆಯ ಕುರಿತು ಸಮುದಾಯಗಳ ಮುಖಂಡರ ಸಲಹೆ ಪರಿಗಣಿಸಲಾಯಿತು. ದೇವರ ದಾಸಿಮಯ್ಯ ಜಯಂತಿಯಂದು ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಿ ನೇಕಾರ ಸಮುದಾಯದ ಆಶೋತ್ತರಗಳಿಗೆ ಮನ್ನಣೆ ನೀಡಬೇಕು ಎಂಬ ಸಲಹೆ ಕೇಳಿ ಬಂತು. ಸರ್ಕಾರದ ನಿರ್ದೇಶನದಂತೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಎಲ್ಲ ಮಹನೀಯರ ಜಯಂತಿಗಳಂದು ಸಾಂಕೇತಿಕವಾಗಿ ಪೂಜೆ ನೆರವೇರಿಸಲಾಗುತ್ತಿದೆ. ವಿಶೇಷವಾಗಿ ಆಚರಿಸುವ ಮನವಿಗಳಿದ್ದರೆ ತಾಲ್ಲೂಕು ಆಡಳಿತಕ್ಕೆ ಅಗತ್ಯ ರೂಪರೇಷೆ ಒದಗಿಸುವಂತೆ ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.