ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾನತೆಯ ಹರಿಕಾರ: ಬಣ್ಣನೆ

ಜಿಲ್ಲಾಡಳಿತದಿಂದ ಸಂವಿಧಾನ ಶಿಲ್ಪಿಯ ಪರಿನಿರ್ವಾಣ ದಿನಾಚರಣೆ
Last Updated 7 ಡಿಸೆಂಬರ್ 2022, 5:08 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ತನ್ನ ಸ್ವಂತಕ್ಕೆ ಏನನ್ನೂ ಬಯಸಲಿಲ್ಲ. ಸಮಾಜದಲ್ಲಿ ಮೇಲು-ಕೀಳು ಎಂಬ ತಾರತಮ್ಯ ಹೋಗಲಾಡಿಸಲು ಶ್ರಮಿಸಿದರು. ಮಹಿಳೆಯರಿಗೂ ಸಮಾನ ಮೀಸಲಾತಿ ನೀಡಲು ಶ್ರಮಿಸಿದ ಮಹಾನ್ ವ್ಯಕ್ತಿ’ ಎಂದು ಜಿಲ್ಲಾಧಿಕಾರಿ ಆರ್. ಲತಾ ಹೇಳಿದರು.

ಪಟ್ಟಣದ ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ಮಂಗಳವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಅಂಬೇಡ್ಕರ್ ಅವರ 66ನೇ ಮಹಾ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಪ್ರತಿಮೆಗೆ ಗೌರವ ಸಲ್ಲಿಸಿ ಅವರು ಮಾತನಾಡಿದರು.

‘ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ ಫಲವಾಗಿ ನಾನು ಜಿಲ್ಲಾಧಿಕಾರಿಯಾಗಿದ್ದೇನೆ. ಸದ್ಯದಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಣಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು
ತಿಳಿಸಿದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಅಂಬೇಡ್ಕರ್ ನ್ಯಾಯ ಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ಸಮಾಜ ಸುಧಾರಕರಾಗಿದ್ದಾರೆ ಎಂದು ಹೇಳಿದರು.

ಮಹಿಳೆಯರು, ದಲಿತರು, ಅಲ್ಪಸಂಖ್ಯಾತರ ಏಳಿಗೆಗೆ ದುಡಿದರು. ಅಸ್ಪೃಶ್ಯತೆ, ಅಸಮಾನತೆ ವಿರುದ್ಧ ದಿಟ್ಟತನದಿಂದ ಹೋರಾಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮಹಾನ್ ಮಾನವತಾವಾದಿ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ, ಸಮಾಜದ ಮುಖಂಡರು, ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು ಭಾಗವಹಿಸಿ
ದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT