ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಮಾಹಿತಿ ವಿಶ್ಲೇಷಣೆ ಅಗತ್ಯ

ಆನೇಕಲ್: ಕೋವಿಡ್‌ ರೂಂಗೆ ಡಾ.ವೈಷ್ಣವಿ ಭೇಟಿ ನೀಡಿ ಸೂಚನೆ
Last Updated 20 ಸೆಪ್ಟೆಂಬರ್ 2020, 3:25 IST
ಅಕ್ಷರ ಗಾತ್ರ

ಆನೇಕಲ್: ಕೊರೊನಾ ಸಂದರ್ಭದಲ್ಲಿ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸೋಂಕಿತರು ಮತ್ತು ಸಾವಿಗೀಡಾದವರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ನೋಡಲ್‌ ಅಧಿಕಾರಿ ಡಾ.ವೈಷ್ಣವಿ ತಿಳಿಸಿದರು.

ಅವರು ಪಟ್ಟಣದಲ್ಲಿ ಕೋವಿಡ್‌ ರೂಂಗೆ ಭೇಟಿ ನೀಡಿ ವೈದ್ಯರ ಸಭೆಯಲ್ಲಿ ಪಾಲ್ಗೊಂಡ ಮಾತನಾಡಿದರು.

ಸಾವಿಗೀಡಾದವರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸುವುದರಿಂದ ಸಮಸ್ಯೆಗಳ ಬಗ್ಗೆ ಅರಿವಾಗುತ್ತದೆ. ಈ ಮೂಲಕ ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಗುರುತಿಸಲು ಸಹಾಯವಾಗುತ್ತದೆ. ಹಾಗಾಗಿ ಪ್ರತಿಯೊಬ್ಬರ ಕೃತಿಸಂಪುಟವನ್ನು ತಯಾರು ಮಾಡಲು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕ್ರಮ ವಹಿಸಬೇಕಾಗಿದೆ ಎಂದರು.

ತಾಲ್ಲೂಕಿನ 13 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕೋವಿಡ್‌ ಸೋಂಕಿತರ ತಪಾಸಣೆಗಳನ್ನು ವೈಜ್ಞಾನಿಕವಾಗಿ ನಿರ್ವಹಿಸಲು ಸೂಕ್ತ ತರಬೇತಿ ಮಾರ್ಗದರ್ಶನಗಳನ್ನು ಆಯಾ ವ್ಯಾಪ್ತಿಯ ಆಶಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕು. ಕೊರೊನಾ ಸಂಕಷ್ಟದ ಸಮಯದಲ್ಲಿ ಹಲವಾರು ಸಂಘ ಸಂಸ್ಥೆಗಳು ನೆರವಾಗಿವೆ. ಮೂರು ಪಾಳಿಗಳಲ್ಲಿ ಕಾರ್ಯನಿರ್ವಹಿಸುವ ವಾರ್‌ರೂಂ ಆನೇಕಲ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ. ವಿವಿಧ ಕಂಪನಿಗಳು ಸಿಎಸ್‌ಆರ್‌ ನಿಧಿಗಳ ಮೂಲಕ ಮಾಸ್ಕ್, ಸ್ಯಾನಿಟೈಜರ್‌ ನೀಡಿವೆ. ಖಾಸಗಿ ಕಂಪನಿಗಳು ಅಂಬುಲೆನ್ಸ್‌‌ ನೀಡಲು ಮುಂದಾಗಿವೆ. ಇವುಗಳನ್ನು ಬಳಸಿಕೊಂಡು ಯಾವುದೇ ರೋಗಿಗೂ ಸಮಸ್ಯೆಯಾಗದಂತೆ ಆರೋಗ್ಯ ಸೌಲಭ್ಯಗಳನ್ನು ನೀಡಲು ಪ್ರಯತ್ನ ಮಾಡಲಾಗಿದೆ ಎಂದರು.

ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನಯ್‌, ಜಿಲ್ಲಾ ಕ್ಷಯ ರೋಗ ಅಧಿಕಾರಿ ಡಾ.ಕುಮಾರ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT