ಆನೇಕಲ್: ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸುರು ರಸ್ತೆಯ ಕೆಎಸ್ಆರ್ಟಿಸಿ ಬಡಾವಣೆಯಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಬಿಹಾರದ ಸುರೇಶ್(25) ಮೃತರು. ಕೊಲೆ ಆರೋಪಿ ಬಿಹಾರದವರು ಎಂದು ಗುರುತಿಸಲಾಗಿದೆ.

ಸುರೇಶ್ ಮತ್ತು ಮುನ್ನ ಗಾರೆ ಕೆಲಸದವರಾಗಿದ್ದು ಮುತ್ತಗಟ್ಟಿಯ ಅನಿಲ್ ಎಂಬ ಮೇಸ್ತ್ರಿಯ ಬಳಿ ಕೆಲಸ ಮಾಡುತ್ತಿದ್ದರು. ಭಾನುವಾರ ರಜೆ ಇದ್ದುದ್ದರಿಂದ ಪಾರ್ಟಿ ಮಾಡಿ ಮದ್ಯಪಾನ ಮಾಡಿ ಗಲಾಟೆ ಮಾಡಿಕೊಂಡಿದ್ದರು. ಸುರೇಶ್ ಈ ಸಂದರ್ಭದಲ್ಲಿ 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಬಂದು ಸಮಾಧಾನ ಮಾಡಿದ್ದರು. ನಂತರವೂ ಸುರೇಶ್ ಮತ್ತು ಮುನ್ನನ ಗಲಾಟೆ ಭಾನುವಾರ ಮಧ್ಯರಾತ್ರಿಯು ಮುಂದುವರೆದಿದೆ. ಮುಂಜಾನೆ ಗಲಾಟೆ ವಿಕೋಪಕ್ಕೆ ತಿರುಗಿದೆ. ಸೋಮವಾರ ಬೆಳಗ್ಗೆ ಸುರೇಶ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಶ್ವಾನದಳ, ವಿಧಿ ವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲಿಸಿದರು.

ಎಎಸ್ಪಿ ವೆಂಕಟೇಶ್ ಪ್ರಸನ್ನ, ಡಿವೈಎಸ್ಪಿ ಮೋಹನ್ ಕುಮಾರ್, ಇನ್ಸ್ಪೆಕ್ಟರ್ ತಿಪ್ಪೇಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.