ಆನೇಕಲ್: ಡಾ.ಬಿ.ಆರ್.ಅಂಬೇಡ್ಕರ್ ವ್ಯಕ್ತಿಯಾಗುವ ಜೊತೆಗೆ ಸಮಾಜದ ಶಕ್ತಿಯಾಗಿದ್ದಾರೆ. ಅವರ ಸಂವಿಧಾನದಿಂದಾಗಿ ಟೀ ಮಾರುವವರು ದೇಶದ ಪ್ರಧಾನಿಯಾಗಿದ್ದಾರೆ. ಸಾಮಾನ್ಯ ಕುಟುಂಬದವಉ ರಾಷ್ಟ್ರಪತಿಯಾಗಿದ್ದಾರೆ ಎಂದು ನ್ಯಾಯಾಧೀಶ ಶಂಕರರೆಡ್ಡಿ ಹೇಳಿದರು.

ಪಟ್ಟಣದ ನ್ಯಾಯಾಲಯದಲ್ಲಿಆನೇಕಲ್ ತಾಲ್ಲೂಕು ವಕೀಲರ ಸಂಘದಿಂದ ಶುಕ್ರವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದರು.

ಅಂಬೇಡ್ಕರ್ ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸಬಾರದು. ಸಮಾಜದ ಪ್ರತಿಯೊಬ್ಬರ ಹೇಳಿಗೆಗೆ ಕಾನೂನು ರೂಪಿಸಿದ್ದಾರೆ. ಅವರು ಅನುಭವಿಸಿದ ಕಷ್ಟಗಳನ್ನು ಸವಾಲಾಗಿ ಪಡೆದು ವಿಶ್ವವೇ ಮುಚ್ಚುವ ಸಂವಿಧಾನವನ್ನು ನೀಡಿದ್ದಾರೆ. ಸಂವಿಧಾನದ ಆಶಯ ಈಡೇರಿಸುವಲ್ಲಿ ವಕೀಲರು ಮತ್ತು ನ್ಯಾಯಾಧೀಶರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ತಿಳಿಸಿದರು.

ಬಾಬಾ ಸಾಹೇಬ್ ತಮ್ಮ ಜ್ಞಾನ ಮತ್ತು ಸಮಾನತೆಯ ತತ್ವದಿಂದ ವಿಶ್ವದಲ್ಲಿಯೇ ಪ್ರಸಿದ್ಧಿಯಾಗಿದ್ದಾರೆ. ಜಾತಿ ವ್ಯವಸ್ಥೆಯು ಸಾಮಾಜಿಕ ಪಿಡುಗಾಗಿದೆ. ಪ್ರತಿಯೊಬ್ಬರು ಸಂವಿಧಾನದಡಿಯಲ್ಲಿ ಉತ್ತಮ ಜೀವನ ನಡೆಸುವುದರಿಂದ ಆರೋಗ್ಯಕರ ಸಮಾಜವನ್ನು ನಿರ್ಮಿಸಬಹುದಾಗಿದೆ ಎಂದು ಆನೇಕಲ್ ನ್ಯಾಯಾಲಯದ ನ್ಯಾಯಾಧೀಶ ಸೋಮಶೇಖರ್ ಹೇಳಿದರು.

ಭಾರತೀಯರು ದಿವ್ಯ ಮನೋಧೈರ್ಯ ಹೊಂದಿದ್ದಾರೆ. ಈ ಮನೋಧೈರ್ಯದ ಮೂಲ ಸಂವಿಧಾನವಾಗಿದೆ. ಅಂಬೇಡ್ಕರ್ ಅವರ ಜೀವನ ಸಾಧನೆಯು ಸಮಾನತೆ ಮತ್ತು ನಾವೆಲ್ಲ ಒಂದೂ ಎಂಬ ಸಂದೇಶ ನೀಡುತ್ತದೆ.ಅವರ ಪ್ರತಿಮೆಯನ್ನು ಗೌರವಿಸುವಂತೆ ಅವರ ತತ್ವ, ಆದರ್ಶವನ್ನು ಅಳವಡಿಸಿಕೊಳ್ಳಬೇಕು. ಈ ಮೂಲಕ ಭವ್ಯ ಭಾರತದ ನಿರ್ಮಾಣಕ್ಕೆ ಕೊಡುಗೆ ನೀಡಬೇಕು. ಸೇವೆ, ವೃತ್ತಿ ಮತ್ತು ವೈಯಕ್ತಿಕ ಜೀವನದಲ್ಲಿ ಅಂಬೇಡ್ಕರ್ ಅವರ ಆಶಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ನ್ಯಾಯಾಧೀಶ ಕೆ. ಕೃಷ್ಣರಾಜ್ ತಿಳಿಸಿದರು.

ಹೈಕೋರ್ಟ್ ಹಿರಿಯ ವಕೀಲ ಮೋಹನ್ ಕುಮಾರ್ ಅವರು ಅಂಬೇಡ್ಕರ್ ಅವರ ಬಗ್ಗೆ ಉಪನ್ಯಾಸ ನೀಡಿದರು.

ಆನೇಕಲ್ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಮಂಜುನಾಥ್, ರಕ್ಷತಾ, ಜನಾರ್ಧನ್, ವಕೀಲರ ಸಂಘದ ಅಧ್ಯಕ್ಷ ವೈ.ಪ್ರಕಾಶ್ ಪಟಾಪಟ್, ಪ್ರಧಾನ ಕಾರ್ಯದರ್ಶಿ ರವೀಶ್ ಕುಮಾರ್, ಉಪಾಧ್ಯಕ್ಷ ಹರೀಶ್, ಖಜಾಂಚಿ ಶಾರದ ಮಣಿ, ಸರ್ಕಾರಿ ಅಭಿಯೋಜಕರಾದ ವಿನೋದ್, ಶಾಲಿನಿ, ಶಾಂತಕುಮಾರಿ, ನಿರ್ದೇಶಕರಾದ ನಾರಾಯಣಸ್ವಾಮಿ, ಮೋಹನ್, ಮೋಹನ್ ಕಾಂತ, ಆರ್.ಸತೀಶ್, ಪುರುಷೋತ್ತಮ್ ಚಿಕ್ಕಹಾಗಡೆ, ಉದಯ್ಕುಮಾರ್, ಪ್ರವೀಣ್, ಮುರಳಿ, ನಾಗರತ್ನ, ನೀಲಮ್ಮ, ಹಿರಿಯ ವಕೀಲರಾದ ಎಂ.ಆರ್.ವೇಣುಗೋಪಾಲ್, ಎಚ್.ಶ್ರೀನಿವಾಸ್, ರಮೇಶ್, ಬಾಲರೆಡ್ಡಿ, ರವೀಂದ್ರ, ಮೂರ್ತಿಕುಮಾರ್, ಎ.ಜಿ.ರಾಜು, ಕೆ.ವಿ.ರವಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-15-2106564017

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.