ಆನೇಕಲ್ : ಐಷಾರಾಮಿ ಜೀವನ ನಡೆಸಲು ಬೈಕ್ ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಬೈಕ್ ಕಳ್ಳನನ್ನು ತಾಲ್ಲೂಕಿನ ಚಂದಾಪುರ ಸೂರ್ಯಸಿಟಿ ಪೊಲೀಸರು ಬಂಧಿಸಿ, ಆರೋಪಿಯಿಂದ ₹15 ಲಕ್ಷ ಮೌಲ್ಯದ 13 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ತಮಿಳುನಾಡಿನ ಹೊಸೂರು ಸಮೀಪದ ಬೇರಿಕೆಯ ನರಸಿಂಹ ಅಲಿಯಾಸ್ ವರದ ಬಂಧಿತ ಆರೋಪಿ.
ಐಷಾರಾಮಿ ಜೀವನ ನಡೆಸಲು ನರಸಿಂಹ ಬೈಕ್ ಕಳ್ಳತನ ಮಾಡುತ್ತಿದ್ದ. ಮನೆಯ ಬಳಿ ನಿಲ್ಲಿಸಿದ್ದ ಬೈಕ್‌ಗಳನ್ನು ಗುರಿಯಾಗಿಸಿಕೊಂಡು ರಾತ್ರಿ ವೇಳೆ ಕದ್ದು, ಹಳ್ಳಿಗಳಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ. ಬಂದ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸರ್ಕಲ್ ಇನ್‌ಸ್ಪೆಕ್ಟರ್ ಸಂಜೀವ್ ಕುಮಾರ್ ಮಹಾಜನ್, ಎಎಸ್‌ಐ ನಾಗರಾಜು, ಹೆಡ್ ಕಾನ್‌ಸ್ಟೆಬಲ್‌ಗಳಾದ ಸತೀಶ್, ಕೃಷ್ಣಮೂರ್ತಿ, ವಿನಯ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.