ಆನೇಕಲ್: ಅಂಬೇಡ್ಕರ್ ಅವರ ತತ್ವ ಸಿದ್ಧಾಂತ ಸಾರಲು ಬ್ಯಾಗಡದೇನಹಳ್ಳಿ ಸಮೀಪದ ಆರ್.ಕೆ ಫಾರ್ಮ್ ಸಮೀಪದ 10 ಗುಂಟೆ ಜಾಗವನ್ನು ಮೀಸಲಿಟ್ಟಿದ್ದು, ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.

ತಾಲ್ಲೂಕಿನ ಬ್ಯಾಗಡದೇನಹಳ್ಳಿಯಲ್ಲಿ ಅಂಬೇಡ್ಕರ್ ಬಳಗದಿಂದ ಭಾನುವಾರ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದರು.

ಅಂಬೇಡ್ಕರ್ ಅವರು ಜ್ಞಾನದ ಪ್ರತೀಕ. ಅವರ ಜ್ಞಾನ ಮತ್ತು ತ್ಯಾಗದಿಂದ ನಾವೆಲ್ಲಾ ಹಕ್ಕುಗಳನ್ನು ಅನುಭವಿಸುತ್ತಿದ್ದೇವೆ. ಅವರ ತತ್ವ ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಿಸುವ ಮೂಲಕ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಪಸರಿಸಬೇಕು ಎಂಬುದು ನಮ್ಮ ಗುರಿಯಾಗಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರತ್ನಮ್ಮ ರಾಜಪ್ಪ ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಹಾಗಡೆ ಹರೀಶ್, ಪಿಎಲ್ಡಿ ನಿರ್ದೇಶಕ ಸೊಪ್ಪಹಳ್ಳಿ ಮಂಜುನಾಥ್, ಛಲವಾದಿ ಮಹಾಸಭಾದ ಖಜಾಂಚಿ ಮೈಕೋ ನಾಗರಾಜು, ಬ್ಯಾಗಡದೇನಹಳ್ಳಿ ರಾಜಪ್ಪ, ಭೈರೇಗೌಡ, ಬಳ್ಳೂರು ಮುನಿವೀರಪ್ಪ, ಕೂಗುರು ಬಸವರಾಜು, ಮೆಣಸಿಗನಹಳ್ಳಿ ಮುನಿರಾಜು, ಕುಮಾರ್, ಗೋವಿಂದ್, ಪಟೇಲ್, ಮಂಜು, ಚೇತ, ದೇವರಾಜು, ಸುರೇಶ್, ವೆಂಕಿ, ಅರುಣ್, ಪ್ರವೀಣ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-15-1618202499

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.