ಆನೇಕಲ್: ತಾಲ್ಲೂಕಿನ ಇಂಡ್ಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಚಿಕ್ಕಹೊಸಹಸಹಳ್ಳಿ ಮಹದೇಶ್ವರ ಜಾತ್ರಾ ಮಹೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ವಿವಿಧ ವ್ಯಾಪ್ತಿಯ ವಿವಿಧ ಗ್ರಾಮಗಳ ಭಕ್ತರು ಜಾತ್ರ ಮಹೋತ್ಸವಕ್ಕೆ ಸಾಕ್ಷಿಯಾದರು.

ಜಾತ್ರಾ ಮಹೋತ್ಸವ ಪ್ರಯುಕ್ತ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದ ನೂರಾರು ಮಂದಿ ಭಕ್ತರು ದೇವಾಲಯದಲ್ಲಿ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಜಾತ್ರೆ ಮಹೋತ್ಸವ ಪ್ರಯುಕ್ತ ಬೀದಿಗಳಲ್ಲಿ ಮೆರವಣಿಗೆ, ಅಗ್ನಿಕೊಂಡ ಮಹೋತ್ಸವ ಆಯೋಜಿಸಲಾಗಿತ್ತು.

ಅಗ್ನಿಕೊಂಡ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಮನೆ ಮನೆ ಬಳಿ ಪೂಜೆ ಸಲ್ಲಿಸಿ ಹೆಜ್ಜೆ ಹೆಜ್ಜೆಗೂ ತೆಂಗಿನಕಾಯಿ ಹೊಡೆದು ಪೂಜೆ ಸಲ್ಲಿಸಿದರು.

ಜಾತ್ರ ಮಹೋತ್ಸವ ಪ್ರಯುಕ್ತ ಕಳೆದ ಎರಡು ದಿನಗಳಿಂದ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆಸಲಾಗಿತ್ತು. ಸೋಮವಾರ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಜಾತ್ರೆ ಅಂಗವಾಗಿ ಚಿಕ್ಕಹೊಸಹಳ್ಳಿಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಗ್ರಾಮವು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿತ್ತು. ಗ್ರಾಮದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾಶಿ ವಿಶ್ವನಾಥ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.

ಡೊಳ್ಳುಕುಣಿತ, ತಮಟೆ, ನಾದಸ್ವರ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಗೆ ಮೆರುಗು ಹೆಚ್ಚಿಸಿತು. ರಾತ್ರಿ ಗ್ರಾಮದೇವತೆಗಳ ಪಲ್ಲಕ್ಕಿ ಉತ್ಸವ ನಡೆಯಿತು. ಮಹದೇಶ್ವರಸ್ವಾಮಿ, ಮುತ್ತುರಾಯಸ್ವಾಮಿ, ಕಾಶಿವಿಶ್ವನಾಥಸ್ವಾಮಿ, ಗಂಗಮ್ಮ, ಸತ್ಯಮ್ಮ, ಸಫಲಮ್ಮ, ಕಾಡಿಗೇರಮ್ಮ ದೇವಿ ಪಲ್ಲಕ್ಕಿ ಉತ್ಸವ ಆಯೋಜಿಸಲಾಗಿತ್ತು. ಮಾರಮ್ಮ ದೇವಿ ಪೂಜೆ ಕುಣಿತ ಮತ್ತು ವೀರಗಾಸೆ ವೈಭವದಿಂದ ನಡೆಯಿತು. ಗುಮ್ಮಳಾಪುರ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಮತ್ತು ದೇವಾಲಯದ ಅರ್ಚಕ ಶಂಕರಪ್ಪ ಧಾರ್ಮಿಕ ಪೂಜೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.