ಆನೇಕಲ್: ಪಟ್ಟಣದಲ್ಲಿ ಸಿಐಟಿಯು ಪಕ್ಷದಿಂದ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಜಾಥಾ ನಡೆಯಿತು. ಎಎಸ್ಬಿ ಮೈದಾನದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು. ಕಾರ್ಮಿಕರ ದಿನದ ಪ್ರಯುಕ್ತ ಕೆಂಪು ಬಾವುಟಗಳು ರಾರಾಜಿಸಿದವು.

ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಸಂಯೋಜಕಿ ವಿಮಲಾ, ಕೇಂದ್ರ ಸರ್ಕಾರವು ಕಾರ್ಮಿಕ ವಿರೋಧಿಯಾಗಿದೆ. ಇದರ ನೀತಿಗಳಿಂದ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾರ್ಮಿಕರ ವಿರೋಧಿಯಾಗಿರುವ ನಾಲ್ಕು ಸಂಹಿತೆಗಳನ್ನು ರದ್ದು ಪಡಿಸಬೇಕು. ಕಾರ್ಮಿಕರ ಹಕ್ಕುಗಳ ಉಳಿವಿದಾಗಿ ಈ ಸಂಹಿತೆಗಳನ್ನು ರದ್ದು ಪಡಿಸಬೇಕು. 8 ಗಂಟೆ ಕೆಲಸ, ಕಾಯಂ ಉದ್ಯೋಗ, ಮಾಸಿಕ ಸರಾಸರಿ 36 ಸಾವಿರ ಕನಿಷ್ಟ ವೇತನ ನಿಗದಿ ಪಡಿಸಬೇಕು ಎಂಬುದು ನಮ್ಮ ಹೋರಾಟದ ಗುರಿಯಾಗಿದೆ ಎಂದರು.

ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಿ.ಎನ್.ಮಂಜುನಾಥ್, ಕೇಂದ್ರ ಸರ್ಕಾರದ ನೀತಿಯಿಂದ ಬೆಲೆ ಏರಿಕೆ, ನಿರುದ್ಯೋಗ ಸೃಷ್ಠಿಯಾಗಿದೆ. ಕಾರ್ಮಿಕರ ವಿರೋಧಿ ಶಕ್ತಿಗಳಿಗೆ ಮುಂದಿನ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡ ಬಾಲರಾಜ್, ಸಿಐಟಿಯು ತಾಲ್ಲೂಕು ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ಸುನೀಲ್, ಮಹದೇಶ್, ಜನವಾದಿ ಮಹಿಳಾ ಸಂಘಟನೆಯ ಅರ್ಚನಾ, ಮುನಿರತ್ನಮ್ಮ, ಸತ್ಯನಾರಾಯಣಪ್ಪ, ಹನುಮಯ್ಯ, ನಾಗರಾಜು, ಅಬ್ಬಯ್ಯ, ಶಾಮಣ್ಣ, ಲಕ್ಷ್ಮಣ್, ನಾರಾಯಣಸ್ವಾಮಿ, ಗೋವಿಂದಪ್ಪ, ವೆಂಕಟೇಶ್, ಗುರು, ಆಸೀನಾ, ಮುದ್ದುಕೃಷ್ಣ, ಫಯಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-15-439828279

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.