ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್: ಕಾಂಗ್ರೆಸ್‌ ಸಂಘಟನೆಗೆ ಶ್ರಮಿಸಿ

ಮೆಳೆನಲ್ಲಸಂದ್ರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿದ್ಧತಾ ಸಭೆ
Last Updated 6 ಮಾರ್ಚ್ 2019, 6:54 IST
ಅಕ್ಷರ ಗಾತ್ರ

ಆನೇಕಲ್: ಜನಪ್ರತಿನಿಧಿಗಳು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುವುದರ ಜೊತೆಗೆ ಜನರ ವಿಶ್ವಾಸವನ್ನು ಗಳಿಸಿಕೊಂಡು ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಅವಶ್ಯಕತೆಯಿದ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.

ಅವರು ತಾಲ್ಲೂಕಿನ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಳೆನಲ್ಲಸಂದ್ರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಕಾರ್ಯಕರ್ತರು ಸದಾ ಜಾಗೃತರಾಗಿರಬೇಕು. ಬಿಜೆಪಿಯವರು ಮಾಡುವ ಕುತಂತ್ರಗಳನ್ನು ಮಟ್ಟ ಹಾಕಲು ಬೂತ್ ಮಟ್ಟದಲ್ಲಿ ಸನ್ನದರಾಗಿರಬೇಕು. ಬೂತ್ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಪಡೆಕಟ್ಟಿಕೊಂಡು ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಜನರಿಗೆ ತಿಳಿಸಬೇಕು. ಜನರನ್ನು ತಲುಪಲು ಮನೆಮನೆ ಭೇಟಿ, ಸಾಮಾಜಿಕ ಜಾಲತಾಣ ನಿರ್ವಹಣೆ, ಕರಪತ್ರಗಳ ವಿತರಣೆ ಸೇರಿದಂತೆ ವಿವಿಧ ತಂತ್ರಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಬೂತ್ ಮಟ್ಟದಿಂದಲೂ ಪಕ್ಷವನ್ನು ಸಂಘಟಿಸಲು ಕಾರ್ಯಕರ್ತರು ಶ್ರಮಿಸಿದರೆ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸುವುದು ಸುಲಭವಾಗುತ್ತದೆ. ಸಭೆಗಳಲ್ಲಿ ಭಾಗವಹಿಸಿದರೆ ಮಾತ್ರ ನಾಯಕರಾಗುವುದಿಲ್ಲ. ನಾಯಕರಾಗಬೇಕಾದರೆ ಬೂತ್ ಮಟ್ಟದಲ್ಲಿ ಪ್ರತಿಯೊಬ್ಬರ ಪರಿಚಯವಿರಬೇಕು. ಪ್ರತಿಯೊಬ್ಬರಿಗೂ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ತಲುಪಿಸಲು ಕೆಲಸ ಮಾಡಬೇಕು ಎಂದರು.

ಬಿಜೆಪಿಯವರು ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಈ ಅಂಶಗಳನ್ನು ಮನೆಮನೆಗೆ ತಿಳಿಸುವುದು ಕಾರ್ಯಕರ್ತರ ಜವಬ್ದಾರಿ. ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಸ್ಥಳೀಯ ಸಮಸ್ಯೆಗಳಿದ್ದರೆ ಚರ್ಚಿಸಿ ಪರಿಹರಿಸಿಕೊಳ್ಳಬೇಕು ಎಂದರು.

ಇವಿಎಂಗಳ ಬಳಕೆಯ ಬಗ್ಗೆ ಜಾಗೃತಿ ಮೂಡಿಸಬೇಕು. ಮತದಾನದ ನಂತರ ಬರುವ ಸ್ಲಿಪ್‌ನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಯಾವುದೇ ಆಮಿಷಕ್ಕೆ ಒಳಗಾಗದೇ ತಮ್ಮ ಮತವನ್ನು ಸರಿಯಾದ ವ್ಯಕ್ತಿಗೆ ಚಲಾಯಿಸಬೇಕು. ಬೂತ್ ಮಟ್ಟದಲ್ಲಿ ನಾಯಕರು ಪ್ರಬಲ
ರಾದರೆ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ನಾಯಕರು ಪ್ರಬಲರಾಗುತ್ತಾರೆ. ಎಲ್ಲರ ವಿಶ್ವಾಸವನ್ನು ಗಳಿಸಿ ಮುಂಚೂ
ಣಿಗೆ ಬರಲು ಅವಕಾಶಗಳಿವೆ. ಹಾಗಾಗಿ ಬೂತ್ ಮಟ್ಟದಲ್ಲಿ ನಾಯಕರು ಸಂಘಟಿತರಾಗಬೇಕು ಎಂದರು.

ಬಮೂಲ್ ಮಾಜಿ ಅಧ್ಯಕ್ಷ ಆರ್.ಕೆ.ರಮೇಶ್ ಮಾತನಾಡಿ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ಅವರ ಕಾಳಜಿಯಿಂದ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆದಿವೆ. 30 ವರ್ಷಗಳಿಂದಲೂ ಅಭಿವೃದ್ಧಿಯಲ್ಲಿ ಹಿಂದುಳಿದಿದ್ದ ದಕ್ಷಿಣ ವಿಧಾನಸಭಾ ಕ್ಷೇತ್ರ ಡಿ.ಕೆ.ಸುರೇಶ್ ಅವರ ಪ್ರಯತ್ನದಿಂದಾಗಿ ಅಭಿವೃದ್ಧಿಯತ್ತ ಸಾಗಿದೆ. ಕ್ಷೇತ್ರದ ಮತದಾರರೊಂದಿಗೆ ನಿರಂತರ ಸಂಪರ್ಕ ಹೊಂದಿರುವ ಸಂಸದರು ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳಿಗೆ ಮುನ್ನೋಟ ನೀಡಿದ್ದಾರೆ ಎಂದರು.

ಮಾಜಿ ವಿಧಾನ ಪರಿಷತ್ ಸದಸ್ಯ ಆರ್.ವಿ.ವೆಂಕಟೇಶ್, ಮಂಟಪ ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಕುಮಾರ್, ಬಿಬಿಎಂಪಿ ಸದಸ್ಯರಾದ ಶೋಭಾಗೌಡ, ಆಂಜಿನಪ್ಪ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಕೃಷ್ಣಪ್ಪ, ಮುಖಂಡರಾದ ಎನ್‌.ಬಿ.ಐ.ನಾಗರಾಜು, ನರೇಂದ್ರಬಾಬು, ರಾಮೋಜಿಗೌಡ, ಸುಷ್ಮಾರಾಜ ಗೋಪಾಲರೆಡ್ಡಿ, ಹಾರಗದ್ದೆ ನಟರಾಜ್, ಇಂಡ್ಲವಾಡಿ ನಾಗರಾಜು, ವಿನೋಧ್, ಅಚ್ಯುತರಾಜು, ದೊಡ್ಡಹಾಗಡೆ ಹರೀಶ್, ಸಕಲವಾರ ಬಾಬುರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT