ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್‌ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆ: ಶಾಸಕ ಬಿ.ಶಿವಣ್ಣ

ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಭೆ
Published 26 ಮಾರ್ಚ್ 2024, 15:51 IST
Last Updated 26 ಮಾರ್ಚ್ 2024, 15:51 IST
ಅಕ್ಷರ ಗಾತ್ರ

ಆನೇಕಲ್ : ಕಾಂಗ್ರೆಸ್‌ ಕಾರ್ಯಕರ್ತರ ಸಭೆ ಮತ್ತು ಚುನಾವಣಾ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಶಾಸಕ ಬಿ.ಶಿವಣ್ಣ ಮಾತನಾಡಿ, ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳೇ ಕಾಂಗ್ರೆಸ್‌ಗೆ ಶ್ರೀರಕ್ಷೆಯಾಗಿದೆ. ಚುನಾವಣೆ ಸಮಯದಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ಕಾಂಗ್ರೆಸ್‌ ನುಡಿದಂತೆ ನಡೆದಿದೆ ಎಂದರು.

ಆರ್ಥಿಕವಾಗಿ ಹಿಂದುಳಿದವನ್ನು ಸಾಮಾಜಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.

ತಾಲ್ಲೂಕಿನ ಐದು ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೇಗೇರಿಸಿ ಪುರಸಭೆ ಮತ್ತು ನಗರಸಭೆಯಾಗಿ ಮಾಡುವ ನಿಟ್ಟಿನಲ್ಲಿ ಡಿ.ಕೆ.ಸುರೇಶ್‌ ಅವರು ಕೊಡುಗೆ ನೀಡಿದ್ದಾರೆ. ತಾಲ್ಲೂಕಿಗೆ ಕಾವೇರಿ ನೀರು ಪೂರೈಕೆ, ಮೆಟ್ರೊ, ರಸ್ತೆಗಳ ಅಭಿವೃದ್ಧಿಗೆ ಕೈಜೋಡಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದರು. 

ಪುರಸಭೆ ಸದಸ್ಯ ಎನ್‌.ಎಸ್.ಪದ್ಮನಾಭ ಮಾತನಾಡಿ, ಆನೇಕಲ್‌ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆ. ತಾಲ್ಲೂಕು ಅಭಿವೃದ್ಧಿ ಪಥದಲ್ಲಿದೆ. ಮತ್ತಷ್ಟು ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಬೇಕು ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಗೌಡ, ಟೌನ್‌ ಕಾಂಗ್ರೆಸ್‌ ಅಧ್ಯಕ್ಷ ಜಿ.ಗೋಪಾಲ್‌, ಮುಖಂಡರಾದ ಬಿ.ಪಿ.ರಮೇಶ್‌, ಶಂಕರ್‌ಕುಮಾರ್, ನಂಜುಂಡಪ್ಪ, ಚಂದ್ರಿಕಾ ಹನುಮಂತರಾವ್‌, ಲೋಕೇಶ್‌, ಪುರಸಭಾ ಸದಸ್ಯರಾದ ಮುನಾವರ್‌, ರಾಜೇಂದ್ರಪ್ರಸಾದ್, ರವಿ, ಮಹಾಂತೇಶ್, ಭಾರತಿ, ಕವಿತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT