ಆನೇಕಲ್: ಪಟ್ಟಣದ ತಿಗಳರ ಬೀದಿಯ ಪಾರ್ಥಸಾರಥಿ ಭಜನೆ ಮನೆಯ ದ್ರೌಪತಮ್ಮ ಹಸಿ ಕರಗ ಮಹೋತ್ಸವ ಗುರುವಾರ ರಾತ್ರಿ ನಡೆಯಲಿದೆ.

ಕರಗ ಶಕ್ತ್ಯೋತ್ಸವದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ದೀಪೋತ್ಸವ ಮತ್ತು ಧರ್ಮರಾಯ ದ್ರೌಪತಮ್ಮ ಕಲ್ಯಾಣೋತ್ಸವ ವಿಜೃಂಭಣೆಯಿಂದ ನಡೆಯಿತು. ನೂರಾರು ಮಹಿಳೆಯರು ಅಲಂಕೃತ ದೀಪ ಹೊತ್ತು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

ಮಂಗಳವಾರ ರಾತ್ರಿ 10.30ಕ್ಕೆ ತಿಗಳರ ಬೀದಿಯ ಭಜನೆಯ ಮನೆಯಿಂದ ಹೊರಟ ದೀಪೋತ್ಸವ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು. ಪ್ರಮುಖ ವೃತ್ತಗಳಲ್ಲಿ ಮಹಿಳೆಯರು ತಮಟೆಯ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಕರಗ ಶಕ್ತ್ಯೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಕರಗ ಹೊರುವ ಚಂದ್ರಪ್ಪ ಪೂಜೆ ಸಲ್ಲಿಸಿದರು. ಉಮೇಶ್ ಶಾಸ್ತ್ರಿ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದವು. ಭಜನೆ ಮನೆಯಲ್ಲಿನ ದ್ರೌಪದಮ್ಮ ಉತ್ಸವ ಮೂರ್ತಿಗೆ ಅಲಂಕಾರ ಮಾಡಲಾಗಿತ್ತು.

ಏ.22ರಂದು ಧ್ವಜಾರೋಹಣದೊಂದಿಗೆ ಪ್ರಾರಂಭವಾಗಿರುವ ಕರಗ ಮಹೋತ್ಸವದ ಅಂಗವಾಗಿ ಪ್ರತಿ ದಿನ ವಿವಿಧ ಕಾರ್ಯಕ್ರಮ ನಡೆಯುತ್ತಿವೆ. ದ್ರೌಪದಿ, ಧರ್ಮರಾಯ, ಕೃಷ್ಣ, ಭೀಮ, ಅರ್ಜುನ, ನಕುಲ, ಸಹದೇವರ ಉತ್ಸವ ಮೂರ್ತಿಗಳನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-15-1031217021

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.