ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್: ಅಕ್ರಮ ಬಡಾವಣೆಗೂ ವಿದ್ಯುತ್‌!

ಆನೇಕಲ್‌ನಲ್ಲಿ ಪ್ರಜಾ ವಿಮೋಚನಾ ಚಳವಳಿವತಿಯಿಂದ ಪ್ರತಿಭಟನೆ
Published 15 ಫೆಬ್ರುವರಿ 2024, 8:00 IST
Last Updated 15 ಫೆಬ್ರುವರಿ 2024, 8:00 IST
ಅಕ್ಷರ ಗಾತ್ರ

ಆನೇಕಲ್: ತಾಲ್ಲೂಕಿನ ವಿವಿಧೆಡೆ ನಿರ್ಮಿಸಿರುವ ಅಕ್ರಮ ಬಡಾವಣೆಗಳಿಗೆ ನೀಡಿರುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬೇಕೆಂದು ಒತ್ತಾಯಿಸಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆಯ ಪದಾಧಿಕಾರಿಗಳು ಜಿಗಣಿ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಆನೇಕಲ್ ಕೃಷ್ಣಪ್ಪ ಮಾತನಾಡಿ, ಹುಲಿಮಂಗಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲವೆಡೆ ಸರ್ಕಾರಿ ಜಾಗಗಳಲ್ಲಿ ನಿರ್ಮಿಸುವ ಅಕ್ರಮ ಬಡಾವಣೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಆರೋಪಿಸಿದರು.

ಸರ್ಕಾರಿ ಜಾಗಗಳಲ್ಲಿರುವ ಅಕ್ರಮ ಕಟ್ಟಡ ಮತ್ತು ಬಡಾವಣೆ ತೆರವುಗೊಳಿಸಬೇಕು ಎಂಬ ನಿಟ್ಟಿನಲ್ಲಿ ಸಂಘಟನೆಯು ಹಲವು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದೆ. ಆದರೆ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಏಕಾಏಕಿ ವಿದ್ಯುತ್ ಸಂಪರ್ಕ ನೀಡಿದ್ದಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮವಹಿಸಬೇಕು ಎಂದರು.

ಪರವಾನಗಿ ಇಲ್ಲದೇ ಅಕ್ರಮವಾಗಿ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಈ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು. ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿರುವ ಬಲಾಢ್ಯರ ವಿರುದ್ಧ ಮುಂದಿನ ದಿನಗಳಲ್ಲಿ ತಾಲ್ಲೂಕು ಕಚೇರಿಯ ಮುಂಭಾಗ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಗೋಮಾಳ ಸೇರಿದಂತೆ ಸರ್ಕಾರಿ ಜಾಗಗಳನ್ನು ಬಡವರು, ದಲಿತರು ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಿಡಬೇಕು. ಆದರೆ ಹಣವಂತರು, ಬಲಾಢ್ಯರು ಪ್ರಭಾವ ಬಳಸಿಕೊಂಡು ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡುತ್ತಿದ್ದಾರೆ. ಒತ್ತುವರಿ ಜಮೀನುಗಳಲ್ಲಿರುವ ಬಡಾವಣೆಗಳಿಗೆ ನೀರು ಮತ್ತು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವುದರಿಂದ ಒತ್ತುವರಿ ಕಡಿಮೆಯಾಗುತ್ತದೆ ಎಂದರು.

ಪ್ರಜಾ ವಿಮೋಚನಾ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಆನೇಕಲ್ ತಾಲೂಕು ಘಟಕದ ಉಪಾಧ್ಯಕ್ಷ ರಾಗಿಹಳ್ಳಿ ಮುನಿರಾಜು, ಪ್ರಧಾನ ಕಾರ್ಯದರ್ಶಿ ಸಬ್‌ಮಂಗಲ ರವಿ, ವೆಂಕಟೇಶ್, ಲವ, ಪರಶುರಾಮ್, ಜಗದೀಶ್, ಚಂದ್ರಶೇಖರ್, ಅಂಬರೀಶ್, ಬಾಬು, ಅಂಜಿ, ರವಿ, ಮೋಹನ್, ಮುನಿರತ್ನ, ರವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT