ಆನೇಕಲ್: ಪಟ್ಟಣದಲ್ಲಿ ಕಾಡಾನೆ ಹಾವಳಿ ನಿಯಂತ್ರಣ ಹೋರಾಟ ಸಮಿತಿ ಪದಾಧಿಕಾರಿಗಳು ತಾಲ್ಲೂಕಿನಲ್ಲಿ ಹೆಚ್ಚಾಗಿರುವ ಕಾಡಾನೆ ಹಾವಳಿ ನಿಯಂತ್ರಿಸುವಂತೆ ಒತ್ತಾಯಿಸಿ ಮಂಗಳವಾರ ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆ ಕಚೇರಿ ಮತ್ತು ಕೆಇಬಿ ಮುಂಭಾಗದಲ್ಲಿ ರೈತರು ಜಮಾವಣೆಗೊಂಡು ಆಕ್ರೋಶ ವ್ಯಕ್ತಪಡಿಸಿದರು.

ಕಾಡಾನೆ ಹಾವಳಿ ನಿಯಂತ್ರಣ ಹೋರಾಟ ಸಮಿತಿ ಗೌರವ ಅಧ್ಯಕ್ಷ ಶಿವರಾಮರೆಡ್ಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಆನೇಕಲ್ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಕ್ರಮ ವಹಿಸಬೇಕು. ತಮಿಳುನಾಡಿನಲ್ಲಿ ಅಳವಡಿಸಿರುವ ರೈಲ್ವೇ ಬ್ಯಾರಿಕೇಡ್ಗಳನ್ನು ಕರ್ನಾಟಕದ ಗಡಿಯಲ್ಲಿಯೂ ಅಳವಡಿಸಿ ಶಾಶ್ವತ ಪರಿಹಾರ ನೀಡಬೇಕು ಎಂದರು.

ಕಳೆದ ಕೆಲ ತಿಂಗಳಿನಿಂದ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ರೈತರ ಬೆಳೆಹಾನಿಯಾಗಿದೆ. ಆದರೆ ಬೆಳೆಹಾನಿ ನಷ್ಟ ಪರಿಹಾರ ನೀಡುತ್ತಿಲ್ಲ. ಇದರಿಂದಾಗಿ ರೈತರು ಪರದಾಡುವಂತಾಗಿದೆ. ಹಾಗಾಗಿ ಅರಣ್ಯ ಇಲಾಖೆ ರೈತರಿಗೆ ಬೆಳೆ ಪರಿಹಾರ ನಷ್ಟ ನಿಗದಿತ ಅವಧಿಯಲ್ಲಿ ನೀಡಬೇಕು. ಕೆಇಬಿಯು ರಾತ್ರಿಯಲ್ಲಿ ವಿದ್ಯುತ್ ನೀಡುತ್ತಿಲ್ಲ. ಇದರಿಂದಾಗಿ ಆನೆಗಳು ಓಡಾಡಿದರೂ ತಿಳಿಯುತ್ತಿಲ್ಲ. ಹಾಗಾಗಿ ಕೆಇಬಿಯವರು ಕಡ್ಡಾಯವಾಗಿ ರಾತ್ರಿ ವಿದ್ಯುತ್ ಪೂರೈಸಬೇಕು. ಸಮಂದೂರು, ಇಂಡ್ಲವಾಡಿ, ವಣಕನಹಳ್ಳಿ, ಕಲ್ಲುಬಾಳು, ಬನ್ನೇರುಘಟ್ಟ, ರಾಗಿಹಳ್ಳಿ ಆನೆಗಳು ಹೆಚ್ಚಾಗಿವೆ. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವ್ಯವಸ್ಥಿತ ಪರಿಹಾರ ನೀಡಬೇಕು ಎಂದರು.

ಕಾಡಾನೆ ಹಾವಳಿ ನಿಯಂತ್ರಣ ಹೋರಾಟ ಸಮಿತಿ ಅಧ್ಯಕ್ಷ ರಮೇಶ್, ಪ್ರಧಾನ ಕಾರ್ಯದರ್ಶಿ ನಾಗೇಶ್, ಪ್ರಭಾಕರ್, ಶಂಕರ್ ಕುಮಾರ್, ಮಂಜುನಾಥ್, ಉದಯ್, ನವೀನ್, ರೈತ ಸಂಘದ ನಾರಾಯಣಪ್ಪ, ಗೋಪಾಲಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-15-163650617

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.