ಆನೇಕಲ್: ಹಾಲಿನ ಖರೀದಿ ದರ ಹೆಚ್ಚಿಸಬೇಕು ಮತ್ತು ಪಶು ಆಹಾರ ಬೆಲೆ ಕಡಿತಗೊಳಿಸಬೇಕೆಂದು ಆಗ್ರಹಿಸಿ ಕರುನಾಡ ರೈತ ಗೋಪಾಲಕರ ಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಕರುನಾಡ ರೈತ ಗೋಪಾಲಕರ ಸಂಘದ ಪದಾಧಿಕಾರಿಗಳು ಪಟ್ಟಣದ ವೆಂಕಟೇಶ್ವರ ಚಿತ್ರಮಂದಿರ ವೃತ್ತದಿಂದ ಮೆರವಣಿಗೆ ನಡೆಸಿ ಆನೇಕಲ್ ಬಮೂಲ್ ಶಿಬಿರ ಶಿಥಲ ಕಚೇರಿಯ ಬಳಿ ಪ್ರತಿಭಟನೆ ನಡೆಸಿದರು. ರೈತರು ಮೈ ಮೇಲೆ ಹಾಲು ಸುರಿದುಕೊಂಡು ರೈತರು ಆಕ್ರೋಶ ವ್ಯಕ್ತಪಡಿಸಿದರು.

ನಂತರ ತಾಲ್ಲೂಕು ಕಚೇರಿಯವರೆಗೂ ಮೆರವಣಿಗೆ ನಡೆಸಿ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಹೆಚ್ಚಿಸಬೇಕು ಹೆಚ್ಚಿಸಬೇಕು ಹಾಲಿನ ದರ ಹೆಚ್ಚಿಸಬೇಕು. ಕಡಿಮೆ ಕಡಿಮೆ ಮಾಡಿ ಪಶು ಆಹಾರದ ಬೆಲೆಯನ್ನು ಕಡಿತಗೊಳಿಸಿ ಎಂದು ಘೋಷಣೆಗಳನ್ನು ಕೂಗಿ ರೈತರು ಪ್ರತಿಭಟನೆ ನಡೆಸಿದರು. ಆನೇಕಲ್ ಡೇರಿ ಬಳಿ ಬಮೂಲ್ ನಿರ್ದೇಶಕ ಆರ್.ಕೆ.ರಮೇಶ್ ಅವರಿಗೆ ಮನವಿ ಸಲ್ಲಿಸಿದರು. ರೈತರು ರಾಸುಗಳನ್ನು ಹಿಡಿದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

ಹಾಲಿನ ದರವನ್ನು ಪ್ರತಿ ಲೀಟರ್ಗೆ ₹35ನಿಂದ ₹50ಕ್ಕೆ ಹೆಚ್ಚಿಸಬೇಕು. ದಿನೇ ದಿನೇ ಪಶು ಆಹಾರದ ಬೆಲೆ ಏರಿಕೆಯಾಗುತ್ತಿದೆ. ಹಾಗಾಗಿ ಕೆಎಂಎಫ್ ಪಶು ಆಹಾರದ ಬೆಲೆಯನ್ನು ಗಣನೀಯವಾಗಿ ಇಳಿಸಬೇಕು. ರೈತರು ಹೈನುಗಾರಿಕೆಯನ್ನು ನಂಬಿ ಬದುಕುತ್ತಿದ್ದಾರೆ. ಹಾಲು ಉತ್ಪಾದಕ ರೈತರಿಗೆ ಅವಶ್ಯಕ ಸೌಲಭ್ಯಗಳನ್ನು ನೀಡಬೇಕು ಎಂದು ಕರುನಾಡ ರೈತ ಗೋಪಾಲಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಸ್.ಮುನಿರಾಜು ಒತ್ತಾಯಿಸಿದರು.

ಬೆಲೆ ಏರಿಕೆಯ ದಿನಗಳಲ್ಲಿ ಹೈನುಗಾರಿಕೆ ಮಾಡುವುದು ಅತ್ಯಂತ ಕಷ್ಟವಾಗಿದೆ. ಸರ್ಕಾರ ರೈತರ ನೆರವಿಗೆ ಬಾರದಿದ್ದರೆ ಮುಂದಿನ ದಿನಗಳಲ್ಲಿ ರೈತರು ಹೋರಾಟರ ಮೊರೆ ಹೋಗಬೇಕಾಗುತ್ತದೆ ಎಂದರು.

ಸಂಘಟನೆಯ ರಾಜ್ಯ ಉಪಾಧ್ಯಕ್ಷ ಮೇಡಹಳ್ಳಿ ಮುರುಗೇಶ್, ಸಂಘಟನಾ ಕಾರ್ಯದರ್ಶಿ ಚಿಕ್ಕಹಾಗಡೆ ಚೇತನ್ ಚಿಕ್ಕಣ್ಣ, ತಾಲ್ಲೂಕು ಅಧ್ಯಕ್ಷ ದಿಲೀಪ್ ಗೌಡ, ಮುಖಂಡರಾದ ಶ್ರೀನಿವಾಸ್, ವೆಂಕಟೇಶ್, ನಾರಾಯಣಪ್ಪ, ಮುನಿರಾಜು, ಹರ್ಷ, ಅಮರನಾಥ್, ಮುನಿವೆಂಕಟಪ್ಪ, ರಮೇಶ್ ರೆಡ್ಡಿ, ದರ್ಶನ್, ಪ್ರವೀಣ್, ಮನೋಜ್, ನಾಗಪ್ಪ, ಲಕ್ಷ್ಮಣ್, ಅಶೋಕ್, ಅಭಿ, ಜೋಗಿ, ಅಳ್ಳಳ್ಳಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-15-1031651819

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.