ಆನೇಕಲ್: ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ತುರ್ತು ಪರಿಸ್ಥಿತಿ ಹಾಗೂ ವಾಹನ ಅಪಘಾತ ನಿರ್ವಹಣೆ ಕಾರ್ಯಾಚರಣೆ ನಡೆಸಿದರು.

ಅಪಘಾತ, ಬೆಂಕಿ ಅಕಸ್ಮಿಕ ಸೇರಿದಂತೆ ತುರ್ತು ಪರಿಸ್ಥಿತಿಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳು, ಗಾಯಾಳುಗಳ ಆರೈಕೆ, ಪ್ರಥಮ ಚಿಕಿತ್ಸೆ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಜನರು ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಗಾಬರಿ ಆಗದೇ ರಕ್ಷಣಾ ಕಾರ್ಯಕ್ಕೆ ಸಹಕರಿಸಬೇಕು. ಘಟನೆ ನಡೆದ ಒಂದು ಗಂಟೆ ಅತ್ಯಂತ ನಿರ್ಣಾಯಕವಾಗಿದ್ದು, ಈ ಸಮಯದಲ್ಲಿ ನೀಡುವ ಸರಿಯಾದ ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸಲು ಅಣುಕು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಆನೇಕಲ್ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಮಂಜುನಾಥ್ ತಿಳಿಸಿದರು.

ವಾಹನಗಳ ಅಪಘಾತವಾದಾಗ ಸಾರ್ವಜನಿಕರು ಮತ್ತು ಪ್ರತ್ಯಕ್ಷದರ್ಶಿಗಳು ಗಾಯಗೊಂಡವರನ್ನು ಸಂರ್ಕಿಸಬೇಕು. ತುರ್ತು ಸಂದರ್ಭದಲ್ಲಿ ಪಾರ್ಕಿಂಗ್ ಲೈಟ್ಗಳನ್ನು ಆನ್ ಮಾಡಿ ಅಪಘಾತಕ್ಕೊಳಗಾದ ವಾಹನದ ಎಂಜಿನ್ ಆಫ್ ಮಾಡಬೇಕು. ಇದರಿಂದ ಬೆಂಕಿ ಹೊತ್ತುಕೊಳ್ಳುವುದು ಮತ್ತು ಇಂಧನ ಸೋರಿಕೆಯಾಗುವುದನ್ನು ತಡೆಯಬಹುದು ಎಂದರು.

ತುರ್ತು ಸೇವೆಗಳಿಗಾಗಿ 112 ಸಹಾಯವಾಣಿಯ ಸೌಲಭ್ಯ ಪಡೆಯಬೇಕು. ಗಾಯಾಳುಗಳ ಆರೈಕೆ ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಬೆನ್ನುಮೂಳೆ ಮತ್ತು ಕುತ್ತಿಗೆಗೆ ಗಾಯವಾಗಿದ್ದರೆ ಅತ್ಯಂತ ಜತನದಿಂದ ಗಾಯಾಳುವನ್ನು ನೋಡಿಕೊಳ್ಳಬೇಕು. ಪ್ರಥಮ ಚಿಕಿತ್ಸೆಗೆ ಆದ್ಯತೆ ನೀಡಬೇಕು. ವಿದ್ಯುತ್ ಅವಘಡಗಳು ಸಂಭವಿಸಿದಾಗ ಸೂಕ್ತ ಕ್ರಮ ವಹಿಸಿ ಯಾರಿಗೂ ತೊಂದರೆಯಾದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಲೆಕ್ಟ್ರಾನಿಕ್ಸಿಟಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಮಂಜುನಾಥ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-15-1838906349

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.