ಆನೇಕಲ್: ಪಟ್ಟಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿಯಿಂದ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ದಾಖಲಾತಿ ಜಾಗೃತಿ ಜಾಥಾ ಶುಕ್ರವಾರ ನಡೆಯಿತು.

ಜಾಥಾದಲ್ಲಿ ವಿದ್ಯಾರ್ಥಿಗಳು, ಸರ್ಕಾರಿ ಶಾಲೆಗಳ ಶಿಕ್ಷಕರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಪಾಲ್ಗೊಂಡಿದ್ದರು. ‘ಸೇರಿಸಿ ಸೇರಿಸಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ,’ ‘ಸರ್ಕಾರಿ ಶಾಲೆಗೆ ಸೇರಿಸಿ ಕನಸುಗಳನ್ನು ಸಾಕಾರಗೊಳಿಸಿ’, ‘ಶಿಕ್ಷಣವಿಲ್ಲದ ಜೀವನ ಕತ್ತಲೆ’ ಎಂದು ಘೋಷಣೆಗಳನ್ನು ಕೂಗಿ ಭಿತ್ತಿ ಪತ್ರಗಳನ್ನು ಹಿಡಿದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

ಮಂತ್ರ ಪ್ರತಿಷ್ಠಾನ, ಓಬಿಎಲ್ಎಫ್, ಇನ್ವಾಲ್ವ್, ಸನ್ಸೇರಾ ಪ್ರತಿಷ್ಠಾನ, ಎಲ್ಎಲ್ಎಫ್ ಪ್ರತಿಷ್ಠಾನ ಸೇರಿದಂತೆ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಎನ್ಎಸ್ಎಸ್ ತಂಡಗಳು ಜಾಥದಲ್ಲಿ ಪಾಲ್ಗೊಂಡಿದ್ದರು. ಪಟ್ಟಣದ ತಿಲಕ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸುವಂತೆ ಜಾಗೃತಿ ಮೂಡಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಗುರುಮೂರ್ತಿ ಮಾತನಾಡಿದರು. ಸಿಡಿಪಿಒ ಮಹೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆಶಾ, ಕ್ಷೇತ್ರ ಸಮನ್ವಯಾಧಿಕಾರಿ ಭಾಸ್ಕರ್, ಶಿಕ್ಷಣ ಸಂಯೋಜಕರಾದ ಅಶ್ವಥಪ್ಪ, ಶಿವಣ್ಣ, ನಾರಾಯಣ್, ಚಂದ್ರರಾಜು, ಸಿಆರ್ಪಿ ಕೋಮಲ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಮಂಜುನಾಥ್, ಶಿಕ್ಷಕರ ಸಂಘದ ಅಧ್ಯಕ್ಷ ಗೋವಿಂದರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-15-1072314674

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.