ಆನೇಕಲ್: ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳೂ ಶೇ 100ರಷ್ಟು ತೆರಿಗೆ ವಸೂಲಿ ಮಾಡಬೇಕು. ಹಣಕಾಸು ವರ್ಷದ ಆರಂಭದಿಂದಲೇ ತೆರಿಗೆ ವಸೂಲಿಗೆ ಆದ್ಯತೆ ನೀಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಯತೀಶ್ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕಿನ 27 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಮತ್ತು ಆಡಳಿತಾಧಿಕಾರಿಗಳ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ತೆರಿಗೆ ಹಣವು ಸದುಪಯೋಗವಾಗಬೇಕು. ಸಂಪರ್ಕ ರಸ್ತೆ, ಒಳಚರಂಡಿ, ಅಂಗನವಾಡಿ ಮತ್ತು ಸರ್ಕಾರಿ ಶಾಲಾ ಕಟ್ಟಡ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಗ್ರಾಮಗಳಲ್ಲಿನ ಮೂಲಸೌಲಭ್ಯ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿಯು ಕ್ರಿಯಾ ಯೋಜನೆ ರೂಪಿಸಬೇಕು ಎಂದರು.

ಬೇಸಿಗೆ ಆರಂಭವಾಗಿದ್ದು, ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಆಡಳಿತಾಧಿಕಾರಿಗಳು ಕ್ರಮ ವಹಿಸಬೇಕು. ಪಂಚಾಯಿತಿಗಳು ಟ್ಯಾಂಕರ್ ಖರೀದಿ, ಅವಶ್ಯಕತೆ ಇರುವೆಡೆ ಅಂತರ್ಜಲ ವ್ಯವಸ್ಥೆ ಸೇರಿದಂತೆ ಅವಶ್ಯಕ ಕ್ರಮಗಳನ್ನು ವಹಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಗ್ರಾಮ ಪಂಚಾಯಿತಿಗಳು ಕಸ ವಿಲೇವಾರಿ ಘಟಕ ಸ್ಥಾಪಿಸಲು ಆದ್ಯತೆ ನೀಡಬೇಕು. ಕಸ ವಿಂಗಡಣೆ ಮತ್ತು ಕಸ ಸಂಗ್ರಹಿಸಲು ಟ್ರ್ಯಾಕ್ಟರ್ ಸೇರಿದಂತೆ ಸ್ವಚ್ಛತೆಗೆ ಅವಶ್ಯಕವಿರುವ ವ್ಯವಸ್ಥೆ ರೂಪಿಸಬೇಕು ಎಂದರು.

ಡಿಜಿಟಲ್ ಗ್ರಂಥಾಲಯ ಸ್ಥಾಪಿಸಿ: ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪಿಸಬೇಕು. ವಿದ್ಯಾರ್ಥಿಗಳು ಮತ್ತು ಯುವಕರು ಉತ್ತಮ ವ್ಯಕ್ತಿಗಳಾಗಲು ಮತ್ತು ಉನ್ನತ ಸಾಧನೆ ಮಾಡಲು ಗ್ರಂಥಾಲಯಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭೈರಪ್ಪ, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ವಿನುತಾ ರಾಣಿ, ಮುಖ್ಯ ಲೆಕ್ಕಾಧಿಕಾರಿ ಯಶೋಧಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-15-1328190608

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.