ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆನೇಕಲ್: ಶಿಕಾರಿಪಾಳ್ಯ ಕೆರೆಯಲ್ಲಿ ಹಸಿರು ಭಾನುವಾರ

Published 16 ಜೂನ್ 2024, 15:58 IST
Last Updated 16 ಜೂನ್ 2024, 15:58 IST
ಅಕ್ಷರ ಗಾತ್ರ

ಆನೇಕಲ್: ತಾಲ್ಲೂಕಿನ ಹುಲಿಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಕಾರಿಪಾಳ್ಯ ಕೆರೆಯಲ್ಲಿ ಅದಮ್ಯ ಚೇತನ ಸಂಸ್ಥೆಯಿಂದ 442ನೇ ಹಸಿರು ಭಾನುವಾರ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳು, ಟೆಕ್ಕಿಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು ಭಾಗಿಗಳಾಗಿ ಗಿಡ ನೆಟ್ಟು ಸಂಭ್ರಮಿಸಿದರು.

ಅದಮ್ಯ ಚೇತನ ಸಂಸ್ಥೆಯ ತೇಜಸ್ವಿನಿ ಅನಂತ್‌ ಕುಮಾರ್‌ ಮಾತನಾಡಿ, ಪರಿಸರ ಸಂರಕ್ಷಣೆ ದಿನನಿತ್ಯದ ಭಾಗವಾಗಬೇಕು. ಈ ನಿಟ್ಟಿನಲ್ಲಿ ಸಂಸ್ಥೆಯು ಹಸಿರು ಭಾನುವಾರ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯವನ್ನು ನಿರಂತರವಾಗಿ ನಡೆಸಿಕೊಂಡು ಬಂದಿರುವುದು ಸಂತಸ ತಂದಿದೆ ಎಂದರು.

ಸೇವಾ ಕಾರ್ಯಗಳಿಗಾಗಿ ವಾರದ ಒಂದು ದಿನವನ್ನು ಮೀಸಲಿಡಬೇಕು. ಈ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕೆಂಬುದು ನಮ್ಮ ಆಶಯವಾಗಿದೆ. ಆಸಕ್ತರು ವಿವಿಧೆಡೆಯಿಂದ ಬಂದು ಸೇವಾ ಕಾರ್ಯದಲ್ಲಿ ಜೊತೆಯಾಗುತ್ತಿದ್ದಾರೆ. ಇದರಿಂದಾಗಿ ಪರಿಸರ ಚಟುವಟಿಕೆಗಳಿಗೆ ಪ್ರೋತ್ಸಾಹ ದೊರೆತಿದೆ. ಕೆರೆಗಳ ಅಭಿವೃದ್ಧಿ, ಗುಂಡು ತೋಪುಗಳ ಸಂರಕ್ಷಣೆ, ರಸ್ತೆ ಬದಿಯಲ್ಲಿ ಗಿಡಗಳನ್ನು ನೆಟ್ಟು ಸಂರಕ್ಷಿಸುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಕೊಡುಗೆ ನೀಡಬೇಕು ಎಂದರು.

ಬಿಎಂಎಸ್‌ ಕಾಲೇಜು ವಿದ್ಯಾರ್ಥಿಗಳು ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು. ಅದಮ್ಯ ಚೇತನದ ಅರುಣ್‌ ಕಮಲಾಕರ್‌, ಮುಖಂಡರಾದ ಮಣಿರಂಜನ್, ಇಶಾನ್‌, ಸುತ್ತಪ್ಪ, ರಾಕೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT