ಆನೇಕಲ್: ತಾಲ್ಲೂಕಿನ ಹಾರಗದ್ದೆಯಲ್ಲಿ ಬುಧವಾರ ಧರ್ಮ ಜಾಗೃತಿ ಸಮಾವೇಶ ನಡೆಯಿತು. 70ಕ್ಕೂ ಹೆಚ್ಚು ಮಠಗಳ ಮಠಾಧೀಶರು ಸಮಾವೇಶದಲ್ಲಿ ಭಾಗಿಯಾದರು.

ಹಾರಗದ್ದೆಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಭಕ್ತಿ ವಚನಾಂಜಲಿ ಪುಸ್ತಕ ಲೋಕಾರ್ಪಣೆಗೊಳಿಸಲಾಯಿತು. ವಚನ ಗಾಯನ ನಡೆಸಲಾಯಿತು.

ನಿವೃತ್ತ ಐಎಎಸ್ ಅಧಿಕಾರಿ ಡಾ.ಸಿ.ಸೋಮಶೇಖರ್ ಮಾತನಾಡಿ, ‘ನಗರೀಕರಣದ ಪ್ರಭಾವದಿಂದಾಗಿ ಧರ್ಮದ ಕಾರ್ಯಕ್ರಮ ಕಡಿಮೆಯಾಗುತ್ತಿವೆ. ಯುವಕರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ಧಾರ್ಮಿಕ ಕೇಂದ್ರಗಳು ಶ್ರಮಿಸಬೇಕು. ಯುವ ಸಮುದಾಯವನ್ನು ಸಬಲೀಕರಣಗೊಳಿಸಲು ಮತ್ತು ಅವರ ಚಿಂತನೆಗಳಲ್ಲಿ ಧರ್ಮದ ಪ್ರಜ್ಞೆ ಮೂಡಿಸಬೇಕು. ಬಸವಣ್ಣರ ವಚನಗಳ ಸಾರವನ್ನು ಸಮಾಜಕ್ಕೆ ತಿಳಿಸುವ ನಿಟ್ಟಿನಲ್ಲಿ ಭಕ್ತಿ ವಚನಾಂಜಲಿ ಪುಸ್ತಕ ಉಪಯುಕ್ತವಾಗುತ್ತದೆ’ ಎಂದರು.

‘ವಚನಗಳು ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದಲು ಉಪಯುಕ್ತವಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ವಚನಗಳ ಮಹತ್ವವೇ ಕಡಿಮೆಯಾಗುತ್ತಿದೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಯುವಕರಿಗೆ ವಚನಗಳ ಸಾರ ತಿಳಿಸಲು ಸಮಯ ಮೀಸಲಿಡಬೇಕು. ಇದರಿಂದಾಗಿ ಯುವಕರಲ್ಲಿ ಮಾನವೀಯ ಮೌಲ್ಯಗಳು ಹೆಚ್ಚಾಗುತ್ತವೆ. ಶೈಕ್ಷಣಿಕ ಚಟುವಟಿಕೆಗಳ ಜತೆಗೆ ನೈತಿಕತೆ, ಮಾನವೀಯತೆ ಹೆಚ್ಚಾಗಲು ಪೂರಕವಾಗುತ್ತದೆ’ ಎಂದರು.

ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಬೇಲಿಮಠದ ಶಿವರುದ್ರ ಸ್ವಾಮೀಜಿ, ಎಡೆಯೂರು ಮಠದ ರೇಣುಕ ಶಿವಾಚಾರ್ಯ ಸ್ವಾಮೀಜಿ, ಸರ್ಪಭೂಷಣ ಮಠದ ಮಲ್ಲಿಕಾರ್ಜುನ ದೇವರು, ದೇಗುಲ ಮಠದ ಚನ್ನಬಸವ ಸ್ವಾಮೀಜಿ, ರಾಜಾಪುರ ಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಗುಮ್ಮಳಾಪುರ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ನಾಗಲಾಪುರ ಮಠದ ತೇಜೇಶಲಿಂಗ ಸ್ವಾಮೀಜಿ, ಹಾರಗದ್ದೆ ಎಚ್.ಎಸ್.ಬಸವರಾಜು, ಕೆ.ಎಸ್.ನಟರಾಜ್, ಎಚ್.ಎಸ್.ನಂಜಪ್ಪ, ಶಿವಕುಮಾರ್, ಹಾರಗದ್ದೆ ಚಂದ್ರಣ್ಣ, ಹಾ.ವೇ.ವೆಂಕಟೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-15-496851591

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.