ದೊಡ್ಡಬಳ್ಳಾಪುರ: ತಾಲ್ಲೂಕಿನ ಹಿಂದೂಪುರ ರಾಜ್ಯ ಹೆದ್ದಾರಿಯ ನಾಯಕರಂಡನಹಳ್ಳಿ ಸಮೀಪ ರಸ್ತೆ ಬದಿಯಲ್ಲಿ ಶನಿವಾರ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬಂದಿರುವ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಚಾಲಕ ಸೇರಿದಂತೆ ಹತ್ತಕ್ಕೂ ಹೆಚ್ಚಿನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಾವಗಡದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಕಲ್ಲಿದ್ದಲು ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಬಸಕ್ಕೆ ಬಸ್ಸಿನ ಮುಂದಿನ ಭಾಗ ನಜ್ಜುಗುಜ್ಜಾಗಿದೆ. ಬಸ್ಸಿನ ಮುಂದಿನ ಸೀಟ್ನಲ್ಲೇ ಕುಳಿತಿದ್ದ ಬಾಲಕ ಲಾರಿ ಸೇರಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಡಿಕ್ಕಿ ರಭಸಕ್ಕೆ ಬಸ್ ಮುಂಭಾಗ ಜಖಂ ಆಗಿದ್ದರಿಂದ ಬಾಲಕ ಸಿಲುಕಿಕೊಂಡಿದ್ದ. ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕನ ಪ್ರಾಣ ರಕ್ಷಿಸಿದರು.

ಬಸ್ ಅಪಘಾತದಿಂದಾಗಿ ಹಿಂದೂಪುರ-ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.