ಆನೇಕಲ್: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ ಮತ್ತು ಸಮೀಕ್ಷೆಯ ಸಲುವಾಗಿ ಗಣತಿದಾರರಿಗೆ ಮತ್ತು ಮೇಲ್ವಿಚಾರಕರಿಗೆ ತರಬೇತಿ ಶಿಬಿರ ಶನಿವಾರ ಪಟ್ಟಣಕ್ಕೆ ಸಮೀಪದ ಅಲಯನ್ಸ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಿತು.

ಶಿಬಿರ ಉದ್ಘಾಟಿಸಿದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ನಿವೃತ್ತ ನ್ಯಾಯಮೂರ್ತಿ ಡಾ.ಎಚ್.ಎನ್.ನಾಗಮೋಹನ್ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣ ಮತ್ತು ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮೇ 5ರಿಂದ 17ರವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮೊಬೈಲ್ ಆಪ್ನಲ್ಲಿಯೇ ಮಾಹಿತಿ ಸಂಗ್ರಹಿಸಬೇಕು. ಗಣತಿದಾರರು ನಿಖರ ಮಾಹಿತಿಯನ್ನು ಸಂಗ್ರಹಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕು. ಇದರಿಂದ ಕುಟುಂಬಗಳ ಸಾಮಾಜಿಕ, ಆರ್ಥಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳಲು ಅನುಕೂಲ ಆಗಲಿದೆ. ಈ ಮೂಲಕ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. ಹಾಗಾಗಿ ಎಲ್ಲಾ ಮಾಹಿತಿಗಳನ್ನು ಗಣತಿದಾರರು ಪಡೆಯಬೇಕು. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಸಹಕರ ನೀಡಬೇಕು. ತಮ್ಮ ಮಾಹಿತಿಗಳನ್ನು ಸಮರ್ಪಕವಾಗಿ ನೀಡುವ ಮೂಲಕ ಸರ್ಕಾರದ ಉದ್ದೇಶಕ್ಕೆ ಬಲ ನೀಡಬೇಕು ಎಂದರು.

ಮೇ 5 ರಿಂದ 17ರವರೆಗೆ ಮನೆ ಮನೆ ಭೇಟಿ 19 ರಿಂದ 21ರವರೆಗೆ ಗ್ರಾಮದ ಮುಖ್ಯ ಸ್ಥಳದಲ್ಲಿ ಗಣತಿದಾರರು ಹಾಜರಿರಬೇಕು. ಯಾವುದೇ ಕುಟುಂಬದ ಮಾಹಿತಿ ಬಿಟ್ಟುಹೋಗಿದ್ದಲ್ಲಿ ಈ ಸಂದರ್ಭದಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ. 19-23ರವರೆಗೆ ಸಾರ್ವಜನಿಕರು ಆನ್ಲೈನ್ನಲ್ಲಿ ಸಹ ಮಾಹಿತಿ ನೀಡಬಹುದಾಗಿದೆ ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ್, ಆನೇಕಲ್ ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಜಿಗಣಿ ಹೋಬಳಿ ಸೇರಿದಂತೆ 494 ಮತಗಟ್ಟೆಗಳಿದ್ದು ಪ್ರತಿ ಮತಗಟ್ಟೆಗಳಿಗೆ ಒಬ್ಬರು ಗಣತಿದಾರರನ್ನು ನೇಮಕ ಮಾಡಲಾಗಿದೆ. 10-12 ಮಂದಿಗೆ ಒಬ್ಬರು ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.