ಆನೇಕಲ್: ತಾಲ್ಲೂಕಿನ ಇಂಡ್ಲವಾಡಿಯ ಸೂರ್ಯಸಿಟಿ 4ನೇ ಹಂತದಲ್ಲಿ 75 ಎಕರೆಯಲ್ಲಿ ಸುಸಜ್ಜಿತ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣವಾಗಲಿದ್ದು, ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.

ಉದ್ದೇಶಿತ ಕ್ರೀಡಾಂಗಣ ನಿರ್ಮಾಣ ಜಾಗಕ್ಕೆ ಗುರುವಾರ ಭೇಟಿ ನೀಡಿಮಾತನಾಡಿದ ಅವರು, ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣ ನಿರ್ಮಾಣಕ್ಕೆ ಮೇ 23ರಂದು ಭೂಮಿ ಪೂಜೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಡಿ.ಕೆ.ಶಿವಕುಮಾರ್ ಸೇರಿದಂತೆ ಸರ್ಕಾರದ ಹಲವು ಸಚಿವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಅಂತರರಾಷ್ಟ್ರೀಯ ಕ್ರೀಡಾಂಗಣವು ಕರ್ನಾಟಕದ ಹೆಮ್ಮೆ. ಸಮಗ್ರ ಅಭಿವೃದ್ಧಿಗೆ ಕ್ರೀಡಾಂಗಣ ಪೂರಕವಾಗಲಿದೆ. ಮುಂದಿನ ದಿನಗಳಲ್ಲಿ ಕ್ರೀಡಾ ಸಂಕೀರ್ಣ ನಿರ್ಮಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

ಅಂತರರಾಷ್ಟ್ರೀಯ ಕ್ರೀಡಾಂಗಣ ಕಾಮಗಾರಿ ನಡೆಯುವುದಿಲ್ಲ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿದ್ದವು. ಈ ಎಲ್ಲರಿಗೂ ಸಚಿವ ಸಂಪುಟ ಸಭೆಯ ಅನುಮತಿ ಮತ್ತು ಭೂಮಿ ಪೂಜೆಯ ಮೂಲಕ ಸರ್ಕಾರ ದಿಟ್ಟ ಉತ್ತರ ನೀಡಿದೆ ಎಂದು ಶಾಸಕ ಬಿ.ಶಿವಣ್ಣ ಹೇಳಿದರು.

ಉದ್ಘಾಟನಾ ಕಾರ್ಯಕ್ರಮಕ್ಕೆ ವಾಹನ ನಿಲುಗಡೆ, ಪೊಲೀಸ್ ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಇಂಡ್ಲವಾಡಿ ನಾಲ್ಕನೇ ಹಂತದಲ್ಲಿ ನಾಲ್ಕು ಸಾವಿರ ನಿವೇಶನಗಳನ್ನು ಮುಖ್ಯಮಂತ್ರಿಗಳು ಲಾಟ್ರಿ ಮೂಲಕ ಹಂಚಿಕೆ ಮಾಡಲಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ಗೃಹ ಮಂಡಳಿಯು ಇಂಡ್ಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವುದರಿಂದ ಸುಸಜ್ಜಿತ ಆಸ್ಪತ್ರೆ, ಸಹಕಾರ ಸಂಘಗಳ ಕಟ್ಟಡ ಕಟ್ಟಲು ಎರಡು ಎಕರೆ ಜಾಗ ಮೀಸಲಿಡಬೇಕು. ಇದನ್ನು ಸರ್ಕಾರಕ್ಕೆ ಹಸ್ತಾಂತರಿಸಬೇಕು. ಇದರಿಂದ ಈ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಿದಂತಾಗುತ್ತದೆ ಎಂದು ಮುಖಂಡರಾದ ಐ.ಸಿ.ಎಂ.ಕೃಷ್ಣಮೂರ್ತಿ ಮತ್ತು ಇಂಡ್ಲವಾಡಿ ನಾಗರಾಜು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ಗೃಹ ಮಂಡಳಿಯ ಆಯುಕ್ತ ಕೆ.ಎ.ದಯಾನಂದ್, ಎನ್.ಬಿ.ಐ.ನಾಗರಾಜು, ದೊಡ್ಡಹಾಗಡೆ ಹರೀಶ್, ಅಚ್ಯುತರಾಜು, ಅರೇಹಳ್ಳಿ ಮಧು, ಮಹದೇವ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-15-1591301891

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.