ಆನೇಕಲ್: ಪಟ್ಟಣದಲ್ಲಿ ಅಪ್ರಾಪ್ತ ವಯಸ್ಸಿನವರು ವಾಹನ ಚಲಾಯಿಸುವುದರ ವಿರುದ್ಧ ಆನೇಕಲ್ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ವಾಹನ ಚಲಾಯಿಸುವ ಅಪ್ರಾಪ್ತ ವಯಸ್ಸಿನವನ್ನು ಹಿಡಿದು ದಂಡ ವಿಧಿಸುತ್ತಿದ್ದಾರೆ. ನಿಯಮ ಉಲ್ಲಂಘಿಸಿದ ನಾಲ್ವರು ಬಾಲಕರು ಮತ್ತು ಅವರ ಪೋಷಕರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಆನೇಕಲ್ ಪಟ್ಟಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಅಪ್ರಾಪ್ತ ವಯಸ್ಕರ ವಾಹನ ಚಲಾವಣೆ ಹೆಚ್ಚಾಗಿತ್ತು. ಹಲವು ಬಾರಿ ಜಾಗೃತಿ ಮೂಡಿಸಿದರೂ ಉಪಯೋಗವಾಗಿರಲಿಲ್ಲ. ಆನೇಕಲ್ ಪೊಲೀಸ್ ಠಾಣೆಯ ಹೊಸ ಸರ್ಕಲ್ ಇನ್ಸ್ಪೆಕ್ಟರ್ ಪ್ರಕಾಶ್ ಮೊದಲ ವಾರದಲ್ಲಿಯೇ ಕಾರ್ಯಾಚರಣೆಗೆ ಇಳಿದಿದ್ದಾರೆ.

ಅಪ್ರಾಪ್ತ ವಯಸ್ಸಿನವರು ವಾಹನ ಚಲಾವಣೆಗೆ ಮೂರು ತಿಂಗಳು ಸಜೆ ಮತ್ತು ₹25 ಸಾವಿರ ದಂಡವಿದೆ. ಹಾಗಾಗಿ ಈ ಬಗ್ಗೆ ಪೋಷಕರು ಹಮನ ವಹಿಸಬೇಕು. ತಮ್ಮ ಮಕ್ಕಳಿಗೆ ವಾಹನ ನೀಡುವ ಮುನ್ನ ಯೋಚಿಸಬೇಕು. ಜಾಗೃತಿ ಮೂಡಿಸುವುದರ ಜೊತೆಗೆ ದಂಡ ವಿಧಿಸುವುದರಿಂದ ಸಾರ್ವಜನಿಕರ ಗಮನಕ್ಕೆ ಬರುತ್ತದೆ ಎಂದು ಪ್ರಕಾಶ್ ತಿಳಿಸಿದರು.

ಬಿಗಿ ಕ್ರಮಗಳನ್ನು ವಹಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಮೊದಲ ಜವಾಬ್ದಾರಿಯಾಗಿದೆ. ರಸ್ತೆ ನಿಯಮಗಳನ್ನು ಪಾಲಿಸಬೇಕು. ಇಲ್ಲವಾದಲ್ಲಿ ಕಾನೂನಿನ ಅನುಸಾರ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-15-83524091

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.