ಆನೇಕಲ್: ತಾಲ್ಲೂಕಿನ ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂನಮಡಿವಾಳ ಗ್ರಾಮದಲ್ಲಿ ಸೋಮೇಶ್ವರ ದೇವಾಲಯದ ವಾರ್ಷಿಕ ಮಹೋತ್ಸವ ಮತ್ತು ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು.

ಗ್ರಾಮದ ಮಹಿಳೆಯರು ಅಲಂಕೃತ ದೀಪಾರತಿ ಹೊತ್ತು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ವಾರ್ಷಿಕೋತ್ಸವ ಪ್ರಯುಕ್ತ ಸೋಮೇಶ್ವರ, ಗಣಪತಿ, ವೀರಾಂಜನೇಯಸ್ವಾಮಿ, ಗ್ರಾಮ ದೇವತೆ ಮಾರಮ್ಮ ದೇವಿ, ನವಗ್ರಹ ದೇವತೆಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಕಾರ್ಯಕ್ರಮದ ಪ್ರಯುಕ್ತ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು.

ದೀಪೋತ್ಸವ ಪ್ರಯುಕ್ತ ಚಂಡೆ ವಾದ್ಯ, ವೀರಗಾಸೆ, ಪೂಜಾ ಕುಣಿತ, ತಮಟೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆ ಆಯೋಜಿಸಲಾಗಿತ್ತು. ಮಹಿಳೆಯರು ದೀಪ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡರು. ದೇಗುಲ ಮುಂಭಾಗದಲ್ಲಿ ಹಾಕಿದ್ದ ಅಗ್ನಿಕೊಂಡ ಪ್ರವೇಶಿಸಿದರು.

ದೀಪೋತ್ಸವ ಪ್ರಯುಕ್ತ ಎರಡು ದಿನಗಳಿಂದ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಹಸಿರು ಮನೆ ಬೆಳಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೂನಮಡಿವಾಳ ಸೋಮಣ್ಣ ಮಾತನಾಡಿ, ಗ್ರಾಮಸ್ಥರೆಲ್ಲ ಒಗ್ಗೂಡಿ ಜಾತ್ಯತೀತವಾಗಿ ವಾರ್ಷಿಕೋತ್ಸವ ಮತ್ತು ದೀಪೋತ್ಸವ ಆಚರಿಸುವುದು ವಿಶೇಷವಾಗಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-15-943207872

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.