ಆನೇಕಲ್: ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಜನವರಿಗೆ ‘ಶಾಸಕರ ನಡಿಗೆ ಹಳ್ಳಿಗಳ ಕಡೆಗೆ’ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರದಿಂದ ನೀಡಲಾದ ಲ್ಯಾಪ್ಟಾಪ್ಗಳನ್ನು ಸೋಮವಾರ ವಿತರಿಸಿ ಮಾತನಾಡಿದರು.

ಪ್ರತಿ ಗ್ರಾಮ ಪಂಚಾಯಿತಿಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗುವುದು. ವೃದ್ಧಾಪ್ಯ ವೇತನ, ವಿಧವಾ ವೇತನಗಳ ಪತ್ರಗಳನ್ನು ಗ್ರಾಮ ಪಂಚಾಯಿತಿಗಳಲ್ಲಿ ನೀಡಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು.

ಕಂದಾಯ ಇಲಾಖೆಯು ಬಹುತೇಕ ಡಿಜಿಟಲ್ ರೂಪದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರೈತರು ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗಲು ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಗಿದೆ. ಇದರಿಂದ ಸಾರ್ವಜನಿಕರಿಗೆ ಸೇವೆಗಳು ಸುಲಭ ಹಾಗೂ ವೇಗವಾಗಿ ನಡೆಯಲಿದೆ ಎಂದರು.

ಒಟ್ಟು 50 ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಯಿತು.

ಬಮೂಲ್ ನಿರ್ದೇಶಕ ಆರ್.ಕೆ.ರಮೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಹೆನ್ನಾಗರ ಎಂ.ಬಾಬುರೆಡ್ಡಿ, ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಎಡಿಎಲ್ಆರ್ ಮದನ್, ಬಗರ್ಹುಕುಂ ಸಾಗುವಳಿ ಸಮಿತಿ ಸದಸ್ಯರಾದ ಬಳ್ಳೂರು ನಾರಾಯಣಸ್ವಾಮಿ, ಕೂಗೂರು ಬಸವರಾಜ್ ಇದ್ದರು.

ಆನೇಕಲ್ ತಾಲ್ಲೂಕಿನಲ್ಲಿ ಶೀಘ್ರದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗುವುದು
ಬಿ. ಶಿವಣ್ಣ ಶಾಸಕ

ಧಾನ್ಯಗಳ ಸಗಟು ಮಳಿಗೆ ಆರಂಭಕ್ಕೆ ಒತ್ತಾಯ

ನೇಕಲ್ ಟಿಎಪಿಸಿಎಂಎಸ್ ಆಹಾರ ಧಾನ್ಯಗಳ ಸಗಟು ಮಳಿಗೆಗೆ ಪುನಃ ಪರವಾನಗಿ ನೀಡಬೇಕು. ಶೀಘ್ರ ಮಳಿಗೆ ಆರಂಭಿಸಬೇಕೆಂದು ಟಿಎಪಿಸಿಎಂಎಸ್ ಅಧ್ಯಕ್ಷ ಹೆನ್ನಾಗರ ಎಂ.ಬಾಬುರೆಡ್ಡಿ ಶಾಸಕ ಬಿ.ಶಿವಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಿದರು. 2001ರವರೆಗೆ ಟಿಎಪಿಸಿಎಂಎಸ್ ಮೂಲಕ ಆನೇಕಲ್ ತಾಲ್ಲೂಕಿನಲ್ಲಿ ಸಗಟು ಮಳಿಗೆ ನಡೆಸಲಾಗುತ್ತಿತ್ತು. ತಾಂತ್ರಿಕ ಕಾರಣಗಳಿಂದಾಗಿ ಸ್ಥಗಿತವಾಗಿದ್ದು ಶಾಸಕರು ಆಹಾರ ಇಲಾಖೆಗೆ ಸೂಚನೆ ನೀಡಿ ಸಗಟು ಮಳಿಗೆ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.