ಆಗಸ್ಟ್ 31ರಂದು ಆನೇಕಲ್ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಸುಧಾ ನಿರಂಜನ್ ಅವರು ಅಧ್ಯಕ್ಷ ಸ್ಥಾನಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ವಿಪ್ ಉಲ್ಲಂಘನೆ ಮತ್ತು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಉಚ್ಚಾಟಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.