ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚತ್ತೆಕೆರೆ ಪಾಳ್ಯ: ಮದ್ಯದಂಗಡಿ ತೆರೆಯಲು ವಿರೋಧ

ಜಿಲ್ಲಾಧಿಕಾರಿ ಕಚೇರಿ ಎದುರು ಗ್ರಾಮಸ್ಥರ ಪ್ರತಿಭಟನೆ
Published 4 ಸೆಪ್ಟೆಂಬರ್ 2024, 14:00 IST
Last Updated 4 ಸೆಪ್ಟೆಂಬರ್ 2024, 14:00 IST
ಅಕ್ಷರ ಗಾತ್ರ

ಆನೇಕಲ್: ತಾಲ್ಲೂಕಿನ ಬನ್ನೇರುಘಟ್ಟ ಸಮೀಪದ ಚತ್ತೆಕೆರೆ ಪಾಳ್ಯದಲ್ಲಿ ಮದ್ಯದಂಗಡಿ ತೆರೆಯುತ್ತಿರುವುದನ್ನು ವಿರೋಧಿಸಿ ಗ್ರಾಮಸ್ಥರು ಈಚೆಗೆ  ಬೆಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಸಿ.ಕೆ.ಪಾಳ್ಯದಲ್ಲಿ ಪರಿಶಿಷ್ಟ ಜಾತಿಯ ಸಮುದಾಯದವರು ಹೆಚ್ಚಾಗಿದ್ದಾರೆ. ಸಮುದಾಯದವರು ಆರ್ಥಿಕವಾಗಿ ಹಿಂದುಳಿದವರು. ಬಾರ್‌ ತೆರೆಯುವುದರಿಂದ ಕುಡಿಯುವುದು ಹೆಚ್ಚಾಗಿ, ಮತ್ತಷ್ಟು ಆರ್ಥಿಕ ಸಮಸ್ಯೆಗೆ ಉಂಟಾಗಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಬಾರ್‌ ತೆರೆಯಬಾರದು ಎಂದು ಪ್ರತಿಭಟನಿರತರು ಒತ್ತಾಯಿಸಿದರು.

ಪ್ರಭಾವಿಗಳು ಕೃಷಿ ಭೂಮಿಯಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಬಾರ್‌ ತೆರೆಯಲು ಸಿದ್ಧತೆ ನಡೆಸಿದ್ದಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಉದ್ದೇಶಿತ ಸ್ಥಳದಲ್ಲಿ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಆಗ್ರಹಿಸಿದರು.

ಕೃಷಿ, ಕೂಲಿ ಕಾರ್ಮಿಕರು ಇಲ್ಲಿ ‌ಬದುಕು ಕಟ್ಟಿಕೊಂಡಿದ್ದಾರೆ. ಇವರ ಶಾಂತಿಯು ಬದುಕಿಗೆ ಕೊಳ್ಳಿ ಇಡಲು ಮದ್ಯದಂಗಡಿ ತೆರೆಯುವ ಪ್ರಯತ್ನ ಮಾಡಲಾಗುತ್ತಿದೆ. ಈ ಭಾಗದಲ್ಲಿ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಶಾಂತಿಯುತ ಮತ್ತು ಆರೋಗ್ಯಕರ ವಾತಾವರಣಕ್ಕಾಗಿ ಬಾರ್‌ ತೆರೆಯಬಾರದು ಎಂದು ಅಬಕಾರಿ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT