ಆನೇಕಲ್: ಪಟ್ಟಣದ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು ಮತ್ತು ರಸ್ತೆ ಗುಂಡಿಗಳಿಂದ ಸಾರ್ವಜನಿಕರಿಗೆ ಮುಕ್ತಿ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ನಗರ ಘಟಕದ ವತಿಯಿಂದ ಬುಧವಾರ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹುಲ್ಲಹಳ್ಳಿ ಶ್ರೀನಿವಾಸ್ ಮಾತನಾಡಿ, ತಾಲ್ಲೂಕಿನಲ್ಲಿ ರಸ್ತೆ ಗುಂಡಿ ಹೆಚ್ಚಾಗುತ್ತಿದೆ. ಆದರೆ, ಸ್ಥಳೀಯ ಶಾಸಕರು ಈ ಬಗ್ಗೆ ಚಿಂತೆ ನಡೆಸದೆ ಸಚಿವ ಸ್ಥಾನ ಪಡೆಯಲು ಹರಸಾಹಸಪಡುತ್ತಿದ್ದಾರೆ. ಅಭಿವೃದ್ಧಿ ಬಗ್ಗೆ ಹೆಚ್ಚು ಆದ್ಯತೆ ನೀಡಬೇಕು. ಲೋಕೋಪಯೋಗಿ ಇಲಾಖೆ ಭ್ರಷ್ಟಾಚಾರದ ಇಲಾಖೆಯಾಗುತ್ತಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಪೋಸ್ಟಿಂಗ್ ಪಡೆಯಲು ₹1-2ಕೋಟಿ ನೀಡಬೇಕಾಗಿದೆ. ಇಂತಹ ಅಧಿಕಾರಿಗಳಿಂದ ಯಾವ ಕೆಲಸ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದರು.

ನೆಲಮಂಗಲದ ಶಾಸಕ ಶ್ರೀನಿವಾಸ್ ಮೊದಲನೇ ದರ್ಜೆ ಗುತ್ತಿಗೆದಾರರಾಗಿದ್ದಾರೆ. ತಾಲ್ಲೂಕಿನ ಲಕ್ಷ್ಮೀಪುರ-ಮುತ್ತೂರು ರಸ್ತೆ ಕಾಮಗಾರಿಯೊಂದರಲ್ಲಿ ಕಾಮಗಾರಿಯನ್ನೇ ನಡೆಸದೆ ಬಿಲ್ ಮಾಡಿಕೊಂಡಿರುವ ಬಗ್ಗೆ ದಾಖಲೆಗಳಿವೆ. ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು. ತಾಲ್ಲೂಕಿನಲ್ಲಿ ಅಪಘಾತಗಳಿಂದಾಗಿ ಅಮಾಯಕರು ಸಾಯುತ್ತಿದ್ದಾರೆ. ಹಾಗಾಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಈ ಬಗ್ಗೆ ಕ್ರಮವಹಿಸಬೇಕು ಎಂದರು.

ತಾಲ್ಲೂಕಿನ ಬಹುತೇಕ ಎಲ್ಲ ರಸ್ತೆಗಳು ದುರಸ್ತಿಗೊಂಡಿವೆ. 13 ವರ್ಷದಿಂದ ಶಾಸಕರಾಗಿರುವವರು ಯಾವ ಅಭಿವೃದ್ಧಿ ಮಾಡಿದ್ದಾರೆ ಎಂಬುದುನ್ನು ಜನರ ಮುಂದಿಡಬೇಕು. ಕಳಪೆ ಕಾಮಗಾರಿ ವಿರುದ್ಧ ಧ್ವನಿ ಎತ್ತಬೇಕು. ಚುನಾವಣೆಯಲ್ಲಿ ಭರವಸೆ ನೀಡುವುದೇ ರಾಜಕೀಯವಲ್ಲ. ಅಭಿವೃದ್ಧಿ ಮೂಲಕ ಮತದಾರರ ಋಣ ತೀರಿಸಬೇಕು ಎಂದರು.

ಬಿಜೆಪಿ ಕಾರ್ಯದರ್ಶಿ ಪುಣ್ಯಕೋಟಿ ಶ್ರೀನಿವಾಸ್ ಮಾತನಾಡಿ, ತಾಲ್ಲೂಕಿನ ರಸ್ತೆಗಳು ಹದಗೆಟ್ಟಿವೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ತಲೆಕೆಡಿಸಿಕೊಳ್ಳದೆ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿದರು.

ಮುಖಂಡರಾದ ಬಿ.ನಾಗರಾಜು, ನರಸಿಂಹರೆಡ್ಡಿ, ತಿಮ್ಮರಾಜು, ಸುರೇಶ್, ಭರತ್, ಮೂರ್ತಿ, ಶ್ರೀನಿವಾಸ್, ಮುರಳಿ, ಮಧು, ಹರೀಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-15-1549473815

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.