ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್: ಒಂದೇ ದಿನ 6 ಪ್ರಕರಣ

Last Updated 18 ಜೂನ್ 2020, 2:27 IST
ಅಕ್ಷರ ಗಾತ್ರ

ಆನೇಕಲ್: ‘ತಾಲ್ಲೂಕಿನಲ್ಲಿ ಬುಧವಾರ ಒಟ್ಟು ಆರು ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದೆ. ದಿನೇ ದಿನೇ ಪ್ರಕರಣಗಳು ಹೆಚ್ಚುತ್ತಿರುವುದು’ ಜನರಲ್ಲಿ ಆತಂಕ ತಂದಿದೆ.

ಅತ್ತಿಬೆಲೆ ಜಯಣ್ಣ ಲೇಔಟ್‌ನಲ್ಲಿ ಮೂರು ದಿನಗಳ ಹಿಂದೆ ಕಾರ್ಖಾನೆ ಕಾರ್ಮಿಕರೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಹೆಂಡತಿ ಮತ್ತು ಮಗಳನ್ನು ಕ್ವಾರಂಟೈನ್‌ ಮಾಡಿ ಕೊರೊನಾ ಪರೀಕ್ಷೆ ಮಾಡಿದಾಗ ಅವರಿಬ್ಬರಲ್ಲೂ ಸೋಂಕು ದೃಢಪಟ್ಟಿದೆ.

ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯಲ್ಲಿ ಮೂರು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೆಬ್ಬಗೋಡಿಯಲ್ಲಿ ಮಿನರಲ್‌ ವಾಟರ್‌ ಸಪ್ಲೈ ಮಾಡುತ್ತಿದ್ದ 51 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೊನಾ ದೃಢಪಟ್ಟಿದೆ. ಇವರು ಇತ್ತೀಚಿಗೆ ಮಂಡ್ಯಕ್ಕೆ ಹೋಗಿ ಬಂದಿದ್ದರು.

ಎಸ್‌ಕೆಎಫ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರಿಗೆ ಕೊರೊನಾ ಪಾಸಿಟಿವ್‌ ಪತ್ತೆಯಾಗಿದೆ. ವೀರಸಂದ್ರದ 31 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬಿಡದಿ ಟೊಯೊಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಪ್ರತಿದಿನ ಹೊಸರೋಡ್‌ನಿಂದ ಕಂಪನಿ ಬಸ್‌ನಲ್ಲಿ ಕಾರ್ಖಾನೆಗೆ ಪ್ರಯಾಣ ಮಾಡುತ್ತಿದ್ದ. ತಾಲ್ಲೂಕಿನ ಯಡವನಹಳ್ಳಿಯಲ್ಲಿ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

‘ಒಂದೇ ದಿನದಲ್ಲಿ ಆನೇಕಲ್‌ ತಾಲ್ಲೂಕಿನಲ್ಲಿ ಆರು ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆಬ್ಬಗೋಡಿ ನಗರಸಭೆಯು ವೀರಸಂದ್ರ ಮತ್ತು ಹೆಬ್ಬಗೋಡಿಯಲ್ಲಿ ನಗರಸಭೆ ವತಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣಗಳು ಪತ್ತೆಯಾದ ಪ್ರದೇಶಗಳನ್ನು ಲಾಕ್‌ಡೌನ್‌ಗೆ ಒಳಪಡಿಸಲಾಗಿದೆ’ ಎಂದು ನಗರಸಭಾ ಆಯುಕ್ತ ಚನ್ನರಾಯಪ್ಪ ತಿಳಿಸಿದ್ದಾರೆ.

ಸೋಂಕಿತರನ್ನು ವಿಕ್ಟೋರಿಯ ಆಸ್ಪತ್ರೆಗೆ ಕಳುಹಿಸಲಾಗಿದೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ವ್ಯಕ್ತಿಗಳು ಮತ್ತು ಅವರ ಪ್ರಯಾಣ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತಹಶೀಲ್ದಾರ್‌ ಸಿ.ಮಹಾದೇವಯ್ಯ ತಿಳಿಸಿದರು.

ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಅಂತರ ಕಾಯ್ದುಕೊಂಡು ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕಾಗಿದೆ. ಕಂಟೈನ್‌ಮೆಂಟ್‌‌ ವಲಯಗಳಲ್ಲಿ ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿದ್ದು ತಪಾಸಣೆ ಚುರುಕುಗೊಳಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT