ಸರ್ಜಾಪುರ(ಆನೇಕಲ್): ತಾಲ್ಲೂಕಿನ ಸರ್ಜಾಪುರ ಹೋಬಳಿಯಲ್ಲಿ ಕೆಐಎಡಿಬಿಯಿಂದ ಭೂ ಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ 330 ದಿನ ಪೂರೈಸಿದ್ದಾರೆ.

ಮುತ್ತಾನಲ್ಲೂರಿನಲ್ಲಿ 330 ದಿನದಿಂದ ಅಹೋರಾತ್ರಿ ಧರಣಿ ನಡೆಯುತ್ತಿದ್ದರೂ ಯಾವ ಜನಪ್ರತಿನಿಧಿ ಹಾಗೂ ಅಧಿಕಾರಿಗಳು ಕಿವಿಯಾಗುತ್ತಿಲ್ಲ ಎಂದು ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಜಾಪುರ ಹೋಬಳಿಯ 13 ಹಳ್ಳಿಗಳ 2500 ಎಕರೆ ಭೂಮಿಯನ್ನು ಕೈಗಾರಿಕ ವಲಯವಾಗಿ ಮಾಡಲು ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳುತ್ತಿದ್ದು, ಪ್ರಾಥಮಿಕ ಅಧಿಸೂಚನೆ ಸಹ ಹೊರಡಿಸಿದೆ. ಭೂ ಸ್ವಾಧೀನಕ್ಕೆ ಅನುಕೂಲ ಆಗುವಂತೆ ಫಲವತ್ತಾದ ಕೃಷಿ ಭೂಮಿಯನ್ನು ಅಧಿಕಾರಿಗಳು ಬಂಜರು ಭೂಮಿ ಎಂದು ವರದಿ ನೀಡಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಸರ್ಕಾರದ ಗಮನ ಸೆಳೆಯಲು ರಸ್ತೆ ತಡೆ, ಬೈಕ್ ರ್ಯಾಲಿ, ರೈತ ಸಮಾವೇಶ, ತಾಲ್ಲೂಕು ಕಚೇರಿ ಮುತ್ತಿಗೆ, ಕೆಐಎಡಿಬಿ ಕಚೇರಿ ಮುತ್ತಿಗೆ, ಫ್ರೀಡಂ ಪಾರ್ಕ್ ಚಲೋ ಸೇರಿದಂತೆ ವಿವಿಧ ರೀತಿಯಾಗಿ ಹೋರಾಟ ನಡೆಸುತ್ತಿದ್ದಾರೆ.

ಕರ್ನಾಟಕ ಸರ್ಕಾರ ಭಂಡ ಸರ್ಕಾರವಾಗಿದೆ. ರೈತರ ಹೋರಾಟ ಮತ್ತು ರೈತರ ತಾಳ್ಮೆಗೆ ಬೆಲೆಯೇ ಇಲ್ಲದಂತಾಗಿದೆ. 330 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಏನಯ್ಯ ನಿಮ್ಮ ಸಮಸ್ಯೆ ಎನ್ನುವವರು ಇಲ್ಲ. ಈ ಹಿಂದೆ ಲೋಕಸಭಾ ಚುನಾವಣೆ ಸಮಯದಲ್ಲಿ ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುತ್ತಾನಲ್ಲೂರಿಗೆ ಭೇಟಿ ನೀಡಿ ರೈತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದರೂ ಈಗ ಅವರೇ ಮುಖ್ಯಮಂತ್ರಿಗಳಾಗುತ್ತಿದ್ದಾರೆ. ರೈತರ ಸಮಸ್ಯೆಗಳಿಗೆ ಪರಿಹಾರ ಕೊಡಬೇಕು. ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ರೈತ ಪರುಶುರಾಮ್ ‘ಪ್ರಜಾವಾಣಿ’ಗೆ ತಿಳಿಸಿದರು.

ವಿಧಾನಸೌಧ ಚಲೋ: ರೈತರು ಕೃಷಿ ಜೊತಗೆ ಹೋರಾಟ ನಡೆಸಲು ಸಿದ್ಧರಾಗಿದ್ದೇವೆ. ರೈತ ಹೋರಾಟಕ್ಕೆ ಬೆಲೆ ನೀಡದ ಸರ್ಕಾರಗಳಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು. ರೈತರು ತಾಳ್ಮೆಯಿಂದ ಇದ್ದೇವೆ. ನಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು. ಮುಂದಿನ ದಿನಗಳಲ್ಲಿ ಗ್ರಾಮದ ಯುವಕರೆಲ್ಲ ಒಗ್ಗೂಡಿ ವಿಧಾನಸೌಧ ಚಲೋ ರೂಪಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು ಎಂದು ಮುತ್ತಾನಲ್ಲೂರು ಗ್ರಾಮದ ಪ್ರಿಯಾಂಕ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-15-1418990646

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.