ಆನೇಕಲ್: ಪಟ್ಟಣದಲ್ಲಿ ಸಂತ ಜೋಸೆಫರ ಜನ್ಮ ದಿನಾಚರಣೆ ಶನಿವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು.

ಸಂತ ಜೋಸೆಫರ ಧರ್ಮ ಕೇಂದ್ರದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಿದವು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯತು.

ಸಂತ ಜೋಸೆಫರ ವಾರ್ಷಿಕ ಮಹೋತ್ಸವ ಪ್ರಯುಕ್ತ ಬಲಿಪೂಜೆ ಸೇರಿ ವಿವಿಧ ಧಾರ್ಮಿಕ ಪೂಜೆ ನಡೆಯಿತು. 500ಕ್ಕೂ ಹೆಚ್ಚು ಮಂದಿ ಭಕ್ತರು ಮೇಣದಬತ್ತಿಗಳನ್ನು ಹಿಡಿದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

18ನೇ ಶತಮಾನಕ್ಕೆ ಸೇರಿದ ಸ್ವಾಮಿ ಮ್ಯಾನುಯೆಲ್ ಡಿಕ್ಯುನಾ ಅವರ ಸಮಾಧಿ ಆನೇಕಲ್ ಸಮೀಪದಲ್ಲಿರುವುದು ಇತಿಹಾಸಕ್ಕೆ ಸಾಕ್ಷಿಯಾಗಿದೆ. ಸಂತ ಜೋಸೆಫರ ಸರಳತೆ, ನಂಬಿಕೆ ಮತ್ತು ಸೌಹಾರ್ದವನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮನ್ವಯ ಮತ್ತು ಸಹಬಾಳ್ವೆಯ ಜೀವನ ನಡೆಸಬೇಕು ಎಂದು ಸಂತ ಜೋಸೆಫರ ಧರ್ಮ ಕೇಂದ್ರದ ಫಾದರ್ ಶಾಂತರಾಜ್ ಥಾಮಸ್ ತಿಳಿಸಿದರು.

ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಹಿಂದೂ, ಮುಸ್ಲಿಂ ಸೇರಿದಂತೆ ಎಲ್ಲಾ ವರ್ಗಗಳ ಜನರು ಚರ್ಚ್ಗೆ ಭೇಟಿ ನೀಡುವುದು ವಿಶೇಷವಾಗಿದೆ. ಬಹುತೇಕ ಕ್ರೈಸ್ತ ಹಬ್ಬಗಳಲ್ಲಿ ಎಲ್ಲರೂ ಒಗ್ಗೂಡಿ ಆಚರಿಸುವುದು ಸಾಮರಸ್ಯಕ್ಕೆ ಉದಾಹರಣೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-15-1324052284

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.