ಆನೇಕಲ್: ತಾಲ್ಲೂಕಿನ ಚಂದಾಪುರ ಛತ್ರಖಾನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಜಿ.ರಂಗನಾಥ್ ಅವರು ಸರ್ಕಾರದಿಂದ ನೀಡುವ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರಂಗನಾಥ ಅವರು ವಿಜ್ಞಾನ ಶಿಕ್ಷಕರಾಗಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಲು ಶಾಲೆಯಲ್ಲಿ ವಿವಿಧ ಚಟುವಟಿಕೆ ರೂಪಿಸಿದ್ದಾರೆ. ವಿಜ್ಞಾನ ಪ್ರಾತ್ಯಕ್ಷಿಕೆಗಳನ್ನು ತಯಾರಿಸಿ, ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಆಸಕ್ತಿ ಮೂಡಿಸಲು ಶ್ರಮಿಸಿದ್ದಾರೆ.
ವಿಜ್ಞಾನ, ಓರಿಗಾಮಿ, ಸಂವನಹನಕಾರರಾಗಿ, ಏಷ್ಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ, ಇನ್ಫೋಸಿಸ್ ಸೈನ್ಸ್ ಪೌಂಡೇಷನ್‌ನ ಉತ್ತಮ ವಿಜ್ಞಾನ ಶಿಕ್ಷಕ ಸೇರಿದಂತೆ ವಿವಿಧ ಪ್ರಶಸ್ತಿಕ್ಕೆ ಭಾಜನರಾಗಿದ್ದಾರೆ.
ಆನೇಕಲ್ ತಾಲ್ಲೂಕಿನ ಚಂದಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಸ್.ಯಶೋಧಾ, ಆನೇಕಲ್‌ನ ಡಿ.ಕೆ.ಬಾಗಿಲು ಹಿರಿಯ ಪ್ರಾಥಮಿಕ ಶಾಲೆಯ ವೈ.ಕೋಮಲಾ ಮತ್ತು ಇಂಡ್ಲವಾಡಿ ಪ್ರೌಢ ಶಾಲೆಯ ಸಹಶಿಕ್ಷಕಿ ಶೋಭಾ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ.