ಆನೇಕಲ್: ಆನೇಕಲ್ ಅಧಿದೈವ ತಿಮ್ಮರಾಯಸ್ವಾಮಿ ರಥೋತ್ಸವ ಬುಧವಾರ ವಿಜೃಂಭಣೆಯಿಂದ ನಡೆಯಿತು. ಉರಿಬಿಸಿಲಿನಲ್ಲಿಯೂ ಭಕ್ತರು ಉತ್ಸಾಹದಿಂದ ರಥವನ್ನು ಎಳೆದು ಭಕ್ತಿ, ಭಾವ ಮೆರೆದರು. ಸುತ್ತಮುತ್ತಲಿನ ಗ್ರಾಮಗಳ ಭಕ್ತರು ವೈಭವದ ಜಾತ್ರೆಗೆ ಸಾಕ್ಷಿಯಾದರು.

ಬುಧವಾರ ಮಧ್ಯಾಹ್ನ 1.40ಸುಮಾರಿಗೆ ತಿಮ್ಮರಾಯಸ್ವಾಮಿಯ ಉತ್ಸವ ಮೂರ್ತಿಗೆ ದೇವಾಲಯದ ಪ್ರಧಾನ ಅರ್ಚಕ ಕೆ.ರಾಮಚಂದ್ರ ಭಟ್ಟ ಅವರು ಪೂಜೆ ಸಲ್ಲಿಸಿದ ನಂತರ ರಥದಲ್ಲಿ ಉತ್ಸವ ಮೂರ್ತಿಯನ್ನು ಕುಳ್ಳರಿಸಲಾಯಿತು. ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸುತ್ತಿದ್ದಂತೆ ನೆರೆದಿದ್ದ ಅಪಾರ ಸಂಖ್ಯೆಯ ಭಕ್ತರು ಗೋವಿಂದ.... ಗೋವಿಂದ.... ಎಂದು ಜಯಘೋಷ ಮಾಡಿ ದವನ ಚುಚ್ಚಿದ ಬಾಳೆಹಣ್ಣನ್ನು ತೇರಿಗೆ ಅರ್ಪಿಸಿ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು.

ಕಲ್ಲಿನ ಚಕ್ರದ ತೇರನ್ನು ಭಕ್ತರು ಕಬ್ಬಿಣದ ಸರಪಳಿ ಮತ್ತು ಹಗ್ಗಗಳಿಂದ ಎಳೆದು ದೇವಾಲಯದ ಮುಂಭಾಗಕ್ಕೆ ತಂದರು. ಸಂಜೆಯಾದರೂ ಭಕ್ತರ ದಂಡು ಕರಗಿರಲಿಲ್ಲ.

ರಥೋತ್ಸವದ ಅಂಗವಾಗಿ ತಿಮ್ಮರಾಯಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಾಲಯ ವಿಶೇಷ ಹೂವುಗಳಿಂದ ಕಂಗೊಳಿಸುತ್ತಿತ್ತು. ದೇವಾಲಯದ ಆವರಣದಲ್ಲಿ ಭಕ್ತರ ದಂಡು ಜಮಾಯಿಸಿತ್ತು. ತಾಲ್ಲೂಕು, ತಮಿಳುನಾಡಿನ ಹೊಸೂರು, ಥಳಿ, ಬಾಗಲೂರು ಸೇರಿದಂತೆ ವಿವಿಧೆಡೆಯಿಂದ ಭಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಆನೇಕಲ್-ಹೊಸೂರು ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು. ರಥೋತ್ಸವದ ಪ್ರಯುಕ್ತ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

ದನಗಳ ಜಾತ್ರೆ: ರಥೋತ್ಸವ ಪ್ರಯುಕ್ತ ನಡೆದ ದನಗಳ ಜಾತ್ರೆಯಲ್ಲಿ ತಾಲ್ಲೂಕಿನ ವಿವಿಧೆಡೆಯಿಂದ ರಾಸುಗಳು ಪಾಲ್ಗೊಂಡಿದ್ದವು. 50ಕ್ಕೂ ಹೆಚ್ಚು ಜೊತೆ ರಾಸುಗಳನ್ನು ತಿಮ್ಮರಾಯಸ್ವಾಮಿ ದೇವಾಲಯದ ಆವರಣದಲ್ಲಿ ಮೆರವಣಿಗೆ ನಡೆಸಿ ದನಗಳ ಜಾತ್ರೆ ನಡೆಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-15-1477637478

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.