ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್: ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

Published 25 ಫೆಬ್ರುವರಿ 2024, 5:49 IST
Last Updated 25 ಫೆಬ್ರುವರಿ 2024, 5:49 IST
ಅಕ್ಷರ ಗಾತ್ರ

ಆನೇಕಲ್: ತಾಲ್ಲೂಕಿನ ಮರಸೂರು ಬಳಿ ಭಾನುವಾರ ಬೆಳಗಿನ ಜಾವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ವಿಜಯ್ ಕುಮಾರ್ (27) ಕೊಲೆಯಾದ ಯುವಕ.

2017ರಲ್ಲಿ ನಡೆದಿದ್ದ ಮನೋಜ್ ಕುಮಾರ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ವಿಜಯ್ ಕುಮಾರ್ ಏಳು ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆ ಆಗಿದ್ದರು.

ಭಾನುವಾರ ಬೆಳಗಿನ ಜಾವ 4 ಗಂಟೆಗೆ ಮನೆಯಿಂದ ಹೊರಗೆ ಕರೆಯಿಸಿಕೊಂಡ ದುಷ್ಕರ್ಮಿಗಳು ಮನೆಯ ಎದುರಿನ ರಸ್ತೆಯಲ್ಲಿ ಭೀಕರವಾಗಿ ಕೊಲೆ ಮಾಡಿದ್ದಾರೆ.

ಹಳೆ ವೈಷ್ಯಮ್ಯದಿಂದ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT