ಆನೇಕಲ್: ಇಲ್ಲಿಗೆ ಸಮೀಪದ ಗೌರೇನಹಳ್ಳಿ ಬಳಿಯ ಕಕ್ಕಮಲ್ಲೇಶ್ವರ ಬೆಟ್ಟ-ಸಿದ್ದನಪಾಳ್ಯ ರಸ್ತೆಯ ಗುಜರಿ ಗೋದಾಮಿನಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಸಿದ್ದನಪಾಳ್ಯ ರಸ್ತೆಯ ಬಾಬು ಎಂಬುವರಿಗೆ ಸೇರಿದ ಗೋದಾಮಿನಲ್ಲಿ ಬುಧವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿತು. ಗೋದಾಮಿನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ನೋಡ ನೋಡುತ್ತಿದ್ದಂತೆ ಬೆಂಕಿ ಕೆನ್ನಾಲಿ ಗೋದಾಮಿಗೆ ವ್ಯಾಪಿಸಿತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯಾಸಪಟ್ಟರು.

ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕ ಪ್ರದೇಶದ ವ್ಯಾಪ್ತಿಯ ಆರ್.ಕೆ.ಟೌನ್ಶಿಪ್ ಗುಜರಿ ಅಂಗಡಿಯಲ್ಲಿಯೂ ಬೆಂಕಿ ಕಾಣಿಸಿಕೊಂಡಿತು. ಬೆಂಕಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-15-1774586995

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.